ದ.ಕ.ಯುತ್ ಕಾಂಗ್ರೇಸ್ ಅಧ್ಯಕ್ಷ ಹುದ್ದೆಯಿಂದ ಮಿಥುನ್ ರೈ ಗೆ ಕಿಕ್ ಔಟ್

Source: sonews | By Staff Correspondent | Published on 6th November 2018, 12:06 AM | Coastal News | State News | Don't Miss |

ಬೆಂಗಳೂರು : ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್  ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗು ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರವೀಂದ್ರದಾಸ್ ಅವರು ಆದೇಶ ಹೊರಡಿಸಿದ್ದಾರೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗು ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ ನ  ಎಂಟು ಮಂದಿ ಕಾರ್ಯದರ್ಶಿಗಳನ್ನು ಹಾಗು ರಾಜ್ಯ ಯುವ ಕಾಂಗ್ರೆಸ್ ನ ಒಬ್ಬ ಉಪಾಧ್ಯಕ್ಷರನ್ನು ಅಮಾನತು ಮಾಡಲಾಗಿದೆ ಎಂದು ರವೀಂದ್ರದಾಸ್ ವಾರ್ತಾಭಾರತಿಗೆ ತಿಳಿಸಿದ್ದಾರೆ.

ಮಿಥುನ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಲ್ಲಿಂದ ಮಾಜಿ ಸಚಿವ ಅಭಯಚಂದ್ರ ಅವರಿಗೇ ಪಕ್ಷ ಮತ್ತೆ ಅವಕಾಶ ನೀಡಿತ್ತು. ಆದರೆ ಮೂಡಬಿದ್ರೆಯಿಂದ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಮಿಥುನ್ ರೈ ಇದರಿಂದ ಬೇಸರಿಸಿಕೊಂಡಿದ್ದರು. ಇದೀಗ ಪಕ್ಷದ ಸಂಘಟನೆ ಮಾಡಬೇಕಾದ ಯುವ ಘಟಕವೇ ನಿಷ್ಕ್ರಿಯವಾಗಿದೆ ಎಂದು ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಮಿಥುನ್ ರೈ " ಅಕ್ಟೊಬರ್ 19 ಕ್ಕೆ ಒಂದು ಸಭೆ ಕರೆದಿದ್ದರು. ನವರಾತ್ರಿ ಸಂದರ್ಭ ಆಗಿದ್ದ ಕಾರಣ ಆ ಸಭೆಯಲ್ಲಿ ಭಾಗವಹಿಸಲು ನನಗೆ ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ನೋಟೀಸ್ ನೀಡಿದ್ದರು. ಅದಕ್ಕೆ ನಾನು ಉತ್ತರ ನೀಡುತ್ತೇನೆ. ಅದಕ್ಕೂ ಮೊದಲು ಜೈಪುರದಲ್ಲಿ ನಡೆದ ಸಭೆಯಲ್ಲಿ ನಾನು ಪಾಲ್ಗೊಂಡಿದ್ದೆ" ಎಂದು ವಾರ್ತಾ ಭಾರತಿಗೆ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...