ತಾಂಡಾ ನಿವಾಸಿಗಳಿಗೆ ಐತಿಹಾಸಿಕ 52 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ: ವರ್ಲ್ಡ್ ಬುಕ್ ಆಫ್ ರಿಕಾರ್ಡ್ ತಂಡದಿಂದ ಸರ್ಕಾರಕ್ಕೆ ಪ್ರಮಾಣ ಪತ್ರ ವಿತರಣೆ.

Source: SO News | By Laxmi Tanaya | Published on 19th January 2023, 9:57 PM | State News | Don't Miss |

ಕಲಬುರಗಿ :  ತಾಂಡಾ ನಿವಾಸಿಗಳಿಗೆ ದೇಶದಲ್ಲಿಯೇ ಐತಿಹಾಸಿಕವಾಗಿ ಗುರುವಾರ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ 5 ಜಿಲ್ಲೆಗಳ 342 ಗ್ರಾಮಗಳ 52,072 ತಾಂಡಾ ನಿವಾಸಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಹಕ್ಕು ಪತ್ರ ನೀಡಿದ್ದರಿಂದ ವರ್ಲ್ಡ್ ಬುಕ್ ಆಫ್ ರಿಕಾರ್ಡ್ ತಂಡ ರಾಜ್ಯ ಸರ್ಕಾರಕ್ಕೆ ವೇದಿಕೆ ಮೇಲೆ ಪ್ರೊವಿಜನಲ್ ಪ್ರಮಾಣ ಪತ್ರ ನೀಡಿತು.

ವಲ್ರ್ಡ್ ಬುಕ್ ಆಫ್ ರಿಕಾರ್ಡ್ ಕರ್ನಾಟಕ ತಂಡದ ಉಪಾಧ್ಯಕ್ಷೆ ವಸಂತ ಕವಿತಾ (ಕೆ.ಸಿ.ರೆಡ್ಡಿ) ಅವರು ಕಂದಾಯ ಸಚಿವ ಆರ್. ಅಶೋಕ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

ಹಕ್ಕು ಪತ್ರ ವಿತರಣೆ ಕುರಿತಂತೆ ಜಿಲ್ಲಾಡಳಿತ ಕೋರಿಕೆ ಮೇರೆಗೆ ಗುರುವಾರ ವರ್ಲ್ಡ್  ಬುಕ್ ಆಫ್ ರಿಕಾರ್ಡ್ ಕರ್ನಾಟಕ ತಂಡದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಂದು ಖುದ್ದಾಗಿ ದಾಖಲೀಕರಣ ಮಾಡಿತು.
ಈ ಕುರಿತು ಪ್ರತಿಕ್ರಿಯೆ ನೀಡಿದ ವಸಂತ ಕವಿತಾ(ಕೆ.ಸಿ.ರೆಡ್ಡಿ) ಅವರು, ಕಲಬುರಗಿ ಜಿಲ್ಲಾಡಳಿತ ಕೋರಿಕೆಯಂತೆ ನಮ್ಮ ತಂಡ ಕಳೆದ 3 ತಿಂಗಳಿನಿಂದ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಿಂದ ದಾಖಲೆಗಳನ್ನು ಪಡೆದು ಪರಿಶೀಲಿಸಿ ಇಂದು ದಾಖಲೀಕರಣಕ್ಕೆ ಆಗಮಿಸಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ ಎಷ್ಟು ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿದೆ ಎಂಬುದನ್ನು ನಿಖರ ಸಂಖ್ಯೆ ಪಡೆದ ನಂತರ ಅಂತಿಮವಾಗಿ ರೆಕಾರ್ಡ್ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...