ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಂದ ಕೋವಿಡ್ ಪರಿಹಾರ ವಿತರಣೆ

Source: SO News | By Laxmi Tanaya | Published on 27th January 2022, 10:18 PM | State News | Don't Miss |

ಬಳ್ಳಾರಿ : ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟ 15 ಜನ ಫಲಾನುಭವಿಗಳ ಕುಟುಂಬಸ್ಥರಿಗೆ ರಾಜ್ಯ ಸರಕಾರದಿಂದ 1ಲಕ್ಷ ರೂ.ಗಳ ಚೆಕ್ ಗಳನ್ನು ಗುರುವಾರ ವಿತರಿಸಿದರು.

ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಸ್ಥರ ಅಹವಾಲುಗಳನ್ನು ಆಲಿಸಿದ ಸಚಿವ ಶ್ರೀರಾಮುಲು ಅವರು ಅವರಿಗೆ ಸಾಂತ್ವನ ಹೇಳಿದರು.

ಕೋವಿಡ್ ಇನ್ನೂ ನಮ್ಮಿಂದ ದೂರವಾಗಿಲ್ಲ. ನಾವೆಲ್ಲರೂ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸೋಣ ಎಂದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...