ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೋವಿಡ್ ರೋಗಿಗಳಿಗೆ ಒಂದು ದಿನದ ಊಟ ವಿತರಣೆ

Source: S.O. News Service | By MV Bhatkal | Published on 10th June 2021, 8:16 PM | Coastal News |

ಭಟ್ಕಳ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ತಾಲೂಕು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ,ಕೋವಿಡ್ ರೋಗಿಗಳಿಗೆ,ಪುರಸಭೆ ಪೌರಕಾರ್ಮಿಕರಿಗೆ ಒಂದು ದಿನದ ಊಟವನ್ನು ಬುಧವಾರ ವಿತರಣೆ ಮಾಡಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ ಮಾತನಾಡಿ,
ಎಐಸಿಸಿ ಹಾಗೂ ಕೆಪಿಸಿಸಿ ಕೋವಿಡ್ ಸಂದರ್ಭದಲ್ಲಿ ಸೋಂಕಿಗೆ ತುತ್ತಾಗಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಆಕ್ಸಿಜನ್, ಪಿಪಿಇ ಕಿಟ್,ಔಷಧಗಳ ಪೂರೈಕೆ, ಆಹಾರ ಕಿಟ್‌ಗಳ ವಿತರಣೆ ಮಾಡಲಾಗುತ್ತಿದೆ.ತಾಲೂಕಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಹಾಗೂ 14
ಬ್ಲಾಕ್‌ಗಳ ಅಡಿಯಲ್ಲಿ ಒಂದು ದಿನದ ಊಟ ವಿತರಣೆ ಮಾಡಲಾಗಿದೆ.ಬೀದಿ ಬದಿ ವ್ಯಾಪಾರಿಗಳಿಗೆ, ಭಿಕ್ಷುಕರಿಗೆ ನಿರ್ಗತಿಕರಿಗೂ ಸಹ ಊಟವನ್ನು ವಿತರಿಸಲಾಗುತ್ತಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್ ಮಾತನಾಡಿ, ರಾಷ್ಟ್ರೀಯ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸೂಚನೆಯ ಮೇರೆಗೆ ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ ಪಕ್ಷ, ಕಾರ್ಯಕರ್ತರು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪಕ್ಷದಿಂದ, ವೈಯಕ್ತಿಕವಾಗಿ ಸಂಕಷ್ಟದಲ್ಲಿರುವ ಜನರ ಸೇವೆಗೆ ಮುಂದಾಗಬೇಕೆಂದು ತಿಳಿಸಲಾಗಿದ್ದು, ಅದರಂತೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.ಈ ಸಂದರ್ಭದಲ್ಲಿ ಜಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಕೈಸರ್ ಮೊತೇಶಮ್,ಪುರಸಭಾ ಸದಸ್ಯ ರವೂಫ ನಾಯಿತೇ,ಸಲೀಮ್,ಇರ್ಷಾದ,ನರಸಿಂಹನಾಯ್ಕ,ಮುಂಡಳ್ಳಿ,ಮುಂತಾದವರು ಉಪಸ್ಥಿತಿ ಇದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...