ಸೆ.15 ರಂದು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ

Source: SO News | By Laxmi Tanaya | Published on 12th September 2023, 10:14 PM | Coastal News | Don't Miss |

ಉಡುಪಿ: ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ .ಕೆ ಅವರು ತಿಳಿಸಿದರು .

 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಜಿಲ್ಲಾ ಮಟ್ಟದ ಕಾರ್ಯಕ್ರಮವು ಉಡುಪಿಯ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾ ಸಂಸ್ಥೆಗಳು ತಮ್ಮಕಚೇರಿ, ವಿದ್ಯಾ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾ ಸಂಸ್ಥೆಗಳು ಹಾಗೂ ಇಲಾಖೆಗಳು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಅಲ್ಪಸಂಖ್ಯಾತಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದಲು ನೋಂದಣಿ ಮಾಡಿಸುವ ಗುರಿ ನಿಗದಿಪಡಿಸಿದ್ದು, ಸಕಾಲದಲ್ಲಿ ನೋಂದಣಿ ಕಾರ್ಯ ಸಂಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...