ಫೆಬ್ರವರಿ ಮೊದಲ ವಾರದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

Source: SO News | By Laxmi Tanaya | Published on 15th January 2021, 9:14 PM | State News | Don't Miss |

ಶಿವಮೊಗ್ಗ : ಫೆಬ್ರವರಿ ಮಾಹೆಯ ಮೊದಲ ವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

 ಅವರು  ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋರೊನ ಸೋಂಕಿನ ಹಿನ್ನೆಲೆಯಲ್ಲಿ ಸ್ಪರ್ಧೆಗಳನ್ನು ಸಂಜೆಯೊಳಗಾಗಿ ಪೂರ್ಣಗೊಳಿಸಲು ಹಾಗೂ ಸರ್ಕಾರವು ಈಗಾಗಲೇ ಬಿಡುಗಡೆ ಮಾಡಿರುವ ಮಾರ್ಗಸೂಚಿಯನ್ನು ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ ಎಂದ ಅವರು, ಈ ಬಾರಿಯ ಸ್ಪರ್ಧೆಗಳಲ್ಲಿ ನೌಕರರ ಕೋರಿಕೆಯಂತೆ ಹೊಸದಾಗಿ ಬಾಲ್‍ಬ್ಯಾಡ್ಮಿಂಟನ್ ಕ್ರೀಡೆಗೆ ಅವಕಾಶ ಒದಗಿಸಲಾಗಿದೆ ಎಂದರು.

 ನಗರದಲ್ಲಿ ವಿವಿಧ ಸಮನಾಂತರ ವೇದಿಕೆಗಳಲ್ಲಿ ನಡೆಯುವ ಸ್ಪರ್ಧೆಗಳಿಗೆ ಆಗಮಿಸುವ ನೌಕರರಿಗೆ ಊಟೋಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ತಮ್ಮ ಇಲಾಖೆಯ ಸಕ್ಷಮ ಅಧಿಕಾರಿಗಳ ದೃಢೀಕರಣ ಪತ್ರ ಹಾಗೂ ಕೆ.ಜಿ.ಐ.ಡಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರುವಂತೆ ಅವರು ಸೂಚಿಸಿದ್ದಾರೆ.

 ಕ್ರೀಡಾಕೂಟದ ಉದ್ಘಾಟನೆಗೆ ನಿಯಮಾನುಸಾರ ಗಣ್ಯರನ್ನು, ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳನ್ನು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಶಿಫಾರಸ್ಸು ಮಾಡಲಾಗುವುದು. ಸದರಿ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾಕೋಟಾದಡಿ ನೇಮಕವಾದ ನೌಕರರು ಮತ್ತು ಸಮವಸ್ತ್ರ ಸಿಬ್ಬಂಧಿಗಳು ಭಾಗವಹಿಸುವಂತಿಲ್ಲ ಎಂದವರು ತಿಳಿಸಿದರು.

 ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸುವ ಈ ಕ್ರೀಡಾಕೂಟಕ್ಕೆ ಅಗತ್ಯವಾಗಿರುವ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದ ಅವರು, ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

 ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ,  ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ರಾಜೇಶ್ ಸುರಗೀಹಳ್ಳೀ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್,  ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್, ಐ.ಪಿ.ಶಾಂತರಾಜ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Read These Next

ಪ್ರೀತಿಸಿ ಮದುವೆಯಾದ ಜೋಡಿ, ಯುವತಿ ತಂದೆ-ತಾಯಿಯಿಂದ ವಿರೋಧ: ಬಾಗಲಕೋಟೆ ಎಸ್​ಪಿ ಕಚೇರಿಗೆ ಸಹಾಯ ಅರಸಿ ಬಂದ ಪ್ರೇಮಿಗಳು

ಪ್ರೀತಿಸಿ ಮದುವೆಯಾದ ಜೋಡಿ, ಯುವತಿ ತಂದೆ-ತಾಯಿಯಿಂದ ವಿರೋಧ: ಬಾಗಲಕೋಟೆ ಎಸ್​ಪಿ ಕಚೇರಿಗೆ ಸಹಾಯ ಅರಸಿ ಬಂದ ಪ್ರೇಮಿಗಳು