ಜಿಲ್ಲೆಯ ಜನತೆ ನಿರ್ಭಿತಿಯಿಂದ ಕೊವೀಡ್ ಲಸಿಕೆ ಪಡೆಯಲು ಮುಂದಾಗಬೇಕು- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Source: SO News | By Laxmi Tanaya | Published on 5th March 2021, 6:00 PM | Coastal News | Don't Miss |

ಕಾರವಾರ : ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೀರಿದ ಅನಾರೋಗ್ಯ ಪೀಡಿತ ಜನರಿಗೆ ಮೂರನೇ ಹಂತದಲ್ಲಿ ಕೋವಿಡ್-೧೯ ಲಸಿಕೆ ವಿತರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು, ಸಾರ್ವಜನಿಕರು ನಿರ್ಭಿತಿಯಿಂದ ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ  ನ್ಯಾಯಾಲಯ ಸಭಾಂಗಣದಲ್ಲಿ ೩ನೇ ಹಂತದ ಲಸಿಕೆ ವಿತರಣೆ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ಪ್ರಥಮ ಹಾಗೂ ದ್ವಿತಿಯ ಹಂತದ ಲಸಿಕಾ ವಿತರಣೆಯನ್ನು  ಜಿಲ್ಲೆಯಲ್ಲಿ ಉತ್ತಮವಾದ ರೀತಿಯಲ್ಲಿ ಯಶಸ್ವಿಗೊಳಿಸಲಾಗಿದೆ. ಮೊದಲ ಹಂತದಲ್ಲಿ 14332 ಜನರು ಹೆಸರು ನೋಂದಣಿ ಮಾಡಿಸಿದ್ದರು. ಈ ಪೈಕಿ ಮೊದಲ ಡೋಸ್‌ನ್ನು 12180 ಜನರಿಗೆ ಲಸಿಕೆ ವಿತರಿಸಲಾಗಿದ್ದು, ಶೇ. 48ರಷ್ಟು ಪಲಿತಾಂಶ ಹಾಗೂ ಎರಡನೇ ಡೋಸ್‌ನ್ನು 8964 ಜನರು ಪಡೆದುಕೊಂಡಿದ್ದು. ಶೇ. 73.60ರಷ್ಟು  ಫಲಿತಾಂಶ ಕಂಡುಬಂದಿದೆ.

 ಎರಡನೇ ಹಂತದಲ್ಲಿ 5845 ಜನರು ಹೆಸರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ 4484 ಜನರು ಮೊದಲ ಡೋಸ್‌ನ್ನು ಪಡೆದಿದ್ದು, ಶೇ. 76.7ರಷ್ಟು  ಫಲಿತಾಂಶ ಕಂಡುಬಂದಿದೆ. ಹೀಗಾಗಿ ಈ ಎರಡು ಹಂತದ ಲಸಿಕಾ ವಿತರಣೆ ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮೊದಲ ಐದು ಸ್ಥಾನ ಗಳಿಸಿದ ಜಿಲ್ಲೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯೂ ಒಂದಾಗಿದೆ ಎಂದರು.

ಕೋವಿಶಿಲ್ಡ್ ಲಸಿಕೆ ಪಡೆದುಕೊಂಡಿದ್ದರಿಂದ ಯಾವುದೇ ಅಡ್ಡ ಪರಿಣಾಮಗಳು  ಕಂಡುಬಂದಿಲ್ಲ.  ಸಾರ್ವಜನಿಕರು ನಿರ್ಭೀತಿಯಿಂದ ಸಮೀಪದ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಗಳಿಗೆ ತೆರಳಿ ಈಗಾಗಲೇ ಜಾರಿಯಲ್ಲಿರುವ ಮೂರನೇ ಹಂತದಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ಮುಗಿಲನ್ ಹೇಳಿದ್ದಾರೆ.

ಮಾರ್ಚ 1 ರಿಂದ  60 ವರ್ಷದ ಮೇಲ್ಪಟ್ಟ ಎಲ್ಲಾ ನಾಗರಿಕರು, 45 ರಿಂದ 59 ವರ್ಷದ ವಯೋಮಾನದ Co-morbidity ಇರುವ ನಾಗರಿಕರಿಗೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ  ಲಸಿಕೆ ನೀಡಲಾಗುತ್ತಿದೆ. ಮಾ. 8 ರಿಂದ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಹಾಗೂ ಆಯುಷ್ಮಾನ್ ಭಾರತ/ಆರೋಗ್ಯ ಕರ್ನಾಟಕದಡಿಯಲ್ಲಿ ನೋಂದಣಿ ಪಡೆದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಲಸಿಕೆ ವಿತರಿಸಲು ಕೆಲವು ಖಾಸಗಿ ಆಸ್ಪತ್ರೆಗಳನ್ನು ಕೊವಿಡ್ ವ್ಯಾಕ್ಸಿನೆಷನ್ ಸೆಂಟರ್ ಮಾಡಲಾಗುತ್ತಿದೆ. ಇದಕ್ಕಾಗಿ  ಶಿರಸಿಯ ಟಿಎಸ್‌ಎಸ್ ಆಸ್ಪತ್ರೆ, ಹೊನ್ನಾವರದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆ, ಕುಮಟಾದ ಕೆನರಾ ಹೆಲ್ತ್ ಕೇರ್ ಸೆಂಟರ್ ಹಾಗೂ ಹೈಟೆಕ್ ಲೈಫ್ ಲೈನ್ ಆಸ್ಪತ್ರೆ, ಕಾರವಾರದ ಅರ್ಥ್ ಮೆಡಿಕಲ್ ಸೆಂಟರ್‌ನವರು ಲಸಿಕೆ ವಿತರಣೆಗೆ ಮುಂದೆ ಬಂದಿವೆ.  ಸಾರ್ವಜನಿಕರು ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಗುರುತಿಸಲಾಗಿರುವ ಈ ಮೇಲಿನ ಐದು ಖಾಸಗಿ ಆಸ್ಪತ್ರೆಯಲ್ಲಿ 250 ರೂ ಹಣ ನೀಡಿ ಲಸಿಕೆ ಪಡೆದುಕೊಳ್ಳಬಹುದು ಎಂದರು.

ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಾರದ ನಾಲ್ಕು ದಿನ ಅಂದರೆ ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರದಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ.  ಜಿಲ್ಲಾ ಮತ್ತು ತಾಲೂಕ ಸರಕಾರಿ ಆಸ್ಪತ್ರೆಗಳು ಹಾಗೂ ಗುರುತಿಸಲಾಗಿರುವ ಈ ಮೇಲಿನ ಐದು ಖಾಸಗಿ ಆಸ್ಪತ್ರೆಯಲ್ಲಿ ವಾರದ ಏಳು ದಿನ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಒಂದು ಕೋವಿಶಿಲ್ಡ್ ಡೋಸ್‌ನಲ್ಲಿ 10 ಜನರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಹಾಳಾಗುವುದನ್ನು ತಡೆಯುವ ದೃಷ್ಟಿಯಿಂದ 10 ಜನರನ್ನು ಒಗ್ಗೂಡಿಸಿಕೊಂಡು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ನಾಗರಿಕರು ತಾವಾಗಿಯೇ ಕೋವಿನ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಕೊಂಡು ತಮಗೆ ಅನುಕೂಲವಿರುವ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯಬಹುದು. ಅಲ್ಲದೇ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಿಕೊಂಡು ಕೂಡಾ ಲಸಿಕೆ ಪಡೆಯಲು ಅವಕಾಶವಿದೆ. ಸಾರ್ವಜನಕರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡುವಾಗ ಆಧಾರ್ ಕಾರ್ಡ್, ವೋಟರ್ ಐಡಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸನ್ಸ್ ಅಥವಾ ಯಾವುದಾದರೊಂದು ಫೋಟೋ ಇರುವ ಐ.ಡಿ ಕಾರ್ಡ್‌ನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.


ಈ ಸಂದರ್ಬದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರದ್ ನಾಯಕ, ಆರ್‌ಸಿಹೆಚ್ ಡಾ. ರಮೇಶ್ ರಾವ್ ಹಾಜರಿದ್ದರು.

Read These Next

ಕೋವಿಡ್ ಸೋಂಕಿತರು ಮೃತಪಟ್ಟರೇ ಮನಾಪಾಲಿಕೆಯಿಂದ ಅಂತ್ಯಸಂಸ್ಕಾರದ ವೆಚ್ಚ: ಶಾಸಕ ವೇದವ್ಯಾಸ ಕಾಮತ್.

ಮಂಗಳೂರು : ಮಹಾನಗರ ಪಾಲಿಕೆ ವ್ಯಾಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ...

ಮದುವೆಗೆ 50 ಜ‌ನರಿಗಷ್ಟೆ ಅನುಮತಿ. ನಿಯಮ ಮೀರಿದರೇ ಕ್ರಮ. ಮಂಗಳೂರು ಡಿಸಿ ಮತ್ತು ಪೊಲೀಸ್ ಕಮಿಷನರ್ ಮಾಹಿತಿ.

ಮಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಗೊಳಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ...

ಕಾರವಾರ : ವ್ಯಕ್ತಿ ನಾಪತ್ತೆ

ಬಡಕಲು ದೇಹ, ಗೋದಿ ಮೈ ಬಣ್ಣ, 5.4 ಎತ್ತರÀ, ಇಂಗ್ಲೀಷ ಮತ್ತು ಕನ್ನಡ ಮಾತನಾಡುವ 59 ವರ್ಷ ಪ್ರಾಯದ ಕುಮಟಾದ ಸಾಣಕಲ ಕೇರಿ ನಿವಾಸಿ ಮಹಾಬಲೇಶ್ವರ ...

ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿರ್ಬಂಧಗಳ ಹೊಸ ಮಾರ್ಗಸೂಚಿ ಜಿಲ್ಲೆಯಲ್ಲಿ ಯಥಾವತ್ ಅನುಷ್ಠಾನ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ದೇಶದಲ್ಲಿ ಕೋವಿಡ್ 2ನೇ ಅಲೆ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ...

ಕೋವಿಡ್ ಸೋಂಕಿತರು ಮೃತಪಟ್ಟರೇ ಮನಾಪಾಲಿಕೆಯಿಂದ ಅಂತ್ಯಸಂಸ್ಕಾರದ ವೆಚ್ಚ: ಶಾಸಕ ವೇದವ್ಯಾಸ ಕಾಮತ್.

ಮಂಗಳೂರು : ಮಹಾನಗರ ಪಾಲಿಕೆ ವ್ಯಾಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ...