ನಾರಾಯಣಗುರುಗಳ ಸ್ಥಬ್ಧಚಿತ್ರಕ್ಕೆ ಅವಕಾಶ ಕೋರಿ ದಕ ಜಿಲ್ಲಾ ಯುವ ಜೆಡಿಎಸ್‌ ವತಿಯಿಂದ ಪ್ರಧಾನಿಗೆ ಮನವಿ

Source: SO News | By Laxmi Tanaya | Published on 18th January 2022, 9:34 PM | Coastal News | Don't Miss |

ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿರುವ ಪುನರ್‌ ಪರೀಶೀಲಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.

ಸಂತ, ಮಾನವತಾವಾದಿ, ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಶೋಷಿತ ವರ್ಗಗಳ ತುಳಿತಕ್ಕೆ ಒಳಗಾದ ಸಮುದಾಯದವರನ್ನು ಮೇಲೆತ್ತಿದವರು ಮತ್ತು ಅವರ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸಿದವರು ಹಾಗೂ ಆಕ್ಷರ ಬ್ರಹ್ಮ ಎಂದೇ ಜನಮಾನಸದಲ್ಲಿ ಮನೆ ಮಾತಾಗಿರುವ ಬ್ರಹ್ಮರ್ಷಿ ನಾರಾಯಣ ಗುರುಗಳೆಂಬ ಬೆಳಕು ಕೇರಳದ ಮೂಲಕ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ, ಸರ್ವ ಧರ್ಮಗಳ ಜನರು ಸಹ ಬಾಳ್ವೆಗಳ ಮೂಲಕ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು. ಇಂತಹ ಮನುಕುಲದ ದಿವ್ಯ ಜ್ಯೋತಿಯೊಂದರ ಸ್ಥಬ್ದ ಚಿತ್ರವೊಂದನ್ನು ಕೇರಳದ ಸರ್ಕಾರವು ದೆಹಲಿಯಲ್ಲಿ ನಡೆಯಲಿರುವ ಜನವರಿ 26ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕೇರಳ ರಾಜ್ಯದ ಹೆಮ್ಮೆಯ ಪ್ರತೀಕವಾಗಿ ಕಳಿಸಿರುವುದನ್ನು ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ಮಾಧ್ಯಮಗಳ ಮೂಲಕ ವರದಿಯಾಗುತ್ತಿರುವುದು ಅತ್ಯಂತ ನೋವಿನ ವಿಚಾರವಾಗಿದೆ.

ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನಾ ಶ್ರೀ ನಾರಾಯಣ ಗುರುಗಳು, ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು, ಅಂತವರ ಮೂರ್ತಿ ಇದ್ದ ಸ್ಥಬ್ದ ಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಆಜ್ಞಾನದ ಪರಮಾವಧಿ, ಆಯ್ಕೆ ಸಮಿತಿಯಲ್ಲಿ ಇಂತಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ. ಇದು “ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದ್ದು” ಬ್ರಹ್ಮರ್ಷಿ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ದ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯ ಅಂಗೀಕಾರ ಮಾಡುವುದರ ಮುಖಾಂತರ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅವಕಾಶ ನೀಡಬೇಕು ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳಿಗೆ ಗೌರವವನ್ನು ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಯುವ ಜೆಡಿಎಸ್ ರಾಜ್ಯ ನಾಯಕರಾದ ಫೈಝಲ್‌ ರೆಹಮಾನ್‌, ಜಿಲ್ಲಾ ನಾಯಕರುಗಳಾದ ಫೈಝಲ್‌ ಮೊಹಮ್ಮದ್‌, ಹಿತೇಶ ರೈ, ಸತ್ತಾರ್‌, ನಾಸಿರ್‌ ಕಂದಕ್‌, ರಷ್‌ ಬ್ಯಾರಿ, ಸುಮೀತ್‌ ಸುವರ್ಣ, ಕೌಶಕ್‌, ಜಿತೇಶ್‌, ರಿತೇಶ್‌, ರೋಹನ್‌, ಪ್ರದೀಪ್‌, ಮೊಹಮ್ಮದ್‌ ಬಿಲಾಲ್‌, ಆರೀಫ್‌, ಅಕ್ರಮ್‌ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...