ಶಾಸಕ ಡಿ.ಕೆ. ಶಿವಕುಮಾರ್‌ ಬಂಧನ: ರಾಜ್ಯಾದ್ಯಂತ ಪ‍್ರತಿಭಟನೆ, ರಾಮನಗರದಲ್ಲಿ ಮೂರು ಬೈಕ್‌ಗಳಿಗೆ ಬೆಂಕಿ

Source: S O News Service | By I.G. Bhatkali | Published on 4th September 2019, 6:39 PM | State News | National News | Don't Miss |

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ , ಜೆಡಿಎಸ್ ಕಾರ್ಯಕರ್ತರ ಜೊತೆ ಡಿ.ಕೆ ಶಿವಕುಮಾರ್ ಅಭಿಮಾನಿಗಳು ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದ ಕಾಂಗ್ರೆಸ್ ಮುಖಂಡರಿಗೆ ಭೇಟಿ ನಿರಾಕರಿಸಲಾಗಿದೆ .ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ನಗರದಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.

ಬೆಂಗಳೂರು ನಗರದ ನಾಲ್ಕೂ ಕಡೆಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 10 ತುಕಡಿಗಳನ್ನು ನಿಯೋಜಿಸಲಾಗಿದೆ. ಪ್ರತಿ ತುಕಡಿಯಲ್ಲಿ 30 ಜನ ಪೊಲೀಸರಿರುತ್ತಾರೆ.

ಎಲ್ಲಾ ಪೊಲೀಸ್ ಅಧಿಕಾರಿಗಳು ಕಳೆದ ರಾತ್ರಿ ನಗರದಾದ್ಯಂತ ಗಸ್ತು ತಿರುಗುತ್ತಿದ್ದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳಾದ ಐಟಿ ಇಲಾಖೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕಚೇರಿಗಳ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ನಗರದ ವಿವಿಧೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನಕಪುರ ರಸ್ತೆ ಕೋಣನಕುಂಟೆ ಕ್ರಾಸ್, ಮಾಗಡಿ ರಸ್ತೆ ಕಾಮಾಕ್ಷಿಪಾಳ್ಯ, ತುಮಕೂರು ರಸ್ತೆ ಪೀಣ್ಯ, ಚಾಲುಕ್ಯ ವೃತ್ತ ಗಾಂಧಿ ಪ್ರತಿಮೆ ಸೇರಿ ನಾನಾ ಭಾಗಗಳಲ್ಲಿ ‌ಪ್ರತಿಭಟನೆ ನಡೆಸಲಾಗಿದರು. ಬಿಜೆಪಿ, ಪ್ರಧಾನಿ‌ ನರೇಂದ್ರ ಮೋದಿ ವಿರುದ್ಧ ಕೂಗು. ಐಟಿ, ಇ.ಡಿ ಮತ್ತು ಸಿಬಿಐ ಸಂಸ್ಥೆಗಳನ್ನು ಐಟಿ ಇಲಾಖೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದರು.

ಕನಕಪುರ ತಾಲೂಕಿನಲ್ಲಿ 11 ಕೆಎಸ್ಅರ್‌ಸಿ ಬಸ್ ಜಖಂಗೊಂಡಿದ್ದು, ಅದರಲ್ಲಿ‌ ಒಂದು ಸಂಪೂರ್ಣ ಸುಟ್ಟು ಕರಕಲಾಗಿದೆ. 

ಮಡಿಕೇರಿಯಲ್ಲಿ  ಸುರಿಯುತ್ತಿರುವ ಭಾರಿ ಮಳೆ ಮಧ್ಯೆ ಟೋಲ್‌ಗೇಟ್‌ನಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದರು.‌

ಕಲಬುರ್ಗಿದಳಿ ಕಾಂಗ್ರೆಸ್ ಕಾರ್ಯಕರ್ತರು ಡಾ.ಬಾಬು ಜಗಜೀವನರಾಂ ಪ್ರತಿಮೆ ಎದುರಿನ ವೃತ್ತದಲ್ಲಿ ಬುಧವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿದರು. ನಂತರ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.‌ 

ರಾಮನಗರದಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದರು.‌ ಕನಕಪುರ ಸಮೀಪದ ಸಾತನೂರು ಹಾಗೂ ಕನಕಪುರ ಸಮೀಪದ ತುಗಣಿಯಲ್ಲಿ‌ ಒಟ್ಟು ಮೂರು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದರು.‌  ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. 

ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. 

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...