ದೊಡ್ಡಬಳ್ಳಾಪುರ: ಕಾರ್ಮಿಕ ಅದಾಲತ್ ಆಟೋ ಪ್ರಚಾರಕ್ಕೆ ಚಾಲನೆ

Source: SO News | By Laxmi Tanaya | Published on 31st August 2021, 9:49 PM | State News | Don't Miss |

ಬೆಂಗಳೂರು : ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ  ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು  ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಮಿಕ ಇಲಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನಲ್ಲಿ ಆಟೋ ಪ್ರಚಾರಕ್ಕೆ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ನ್ಯಾ. ದೀಪಾ. ಕೆ. ಆರ್ ಮತ್ತು ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ಅವರು ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕಾರ್ಮಿಕ ಸಮಸ್ಯೆ ಪರಿಹರಿಸಲು ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಆಗಸ್ಟ್ 16 ರಿಂದ ಸೆಪ್ಟೆಂಬರ್ 16 ವರೆಗೆ ಬೆಳಿಗ್ಗೆ 10.30 ರಿಂದ ಅಪರಾಹ್ನ 4 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.

   ಸೆಪ್ಟೆಂಬರ್ 1 ರಿಂದ 5 ರವರೆಗೆ ಆಟೋ ಪ್ರಚಾರ ನಡೆಯಲಿದ್ದು, ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಮತ್ತು ಸ್ವೀಕೃತಿ ಪತ್ರ ಹಾಗೂ ಬ್ಯಾಂಕ್ ವಿವರಗಳನ್ನು ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸಬಹುದು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬಹುದು.

   ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ. ಎನ್. ಭೈರೇಗೌಡ, ಕಾರ್ಯದರ್ಶಿ ಎ. ಕೃಷ್ಣಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್. ಆರ್. ನಾಗೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ತಾಲ್ಲೂಕು ಕಾರ್ಮಿಕ ನಿರೀಕ್ಷಕ ಎಂ. ಪ್ರದೀಪ್ , ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಕಾರ್ಯಕ್ರಮ ಅಧಿಕಾರಿ ಕರಿಯಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...