ಮೆಹುಲ್‌ ಚೋಕ್ಸಿಗೆ ಜಾಮೀನು ನಿರಾಕರಿಸಿದ ಡೊಮಿನಿಕಾ ಮ್ಯಾಜಿಸ್ಟ್ರೇಟ್‌

Source: PTI | By MV Bhatkal | Published on 3rd June 2021, 7:15 PM | National News |


ನವದೆಹಲಿ:ಅಕ್ರಮವಾಗಿ ಕೆರಿಬಿಯನ್‌ ದ್ವೀಪ ರಾಷ್ಟ್ರಕ್ಕೆ ಪ್ರವೇಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಜ್ರ ಉದ್ಯಮಿ ಮೆಹುಲ್ ಚೋಕ್ಸಿಗೆ ಡೊಮಿನಿಕಾ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಹೇಬಿಯಸ್‌ ಕಾರ್ಪಸ್‌ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಡೊಮಿನಿಕಾ ಹೈಕೋರ್ಟ್‌ ನೀಡಿದ್ದ ಸೂಚನೆ ಮೇರೆಗೆ ಚೋಕ್ಸಿ ಅವರನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಡೊಮಿನಿಕಾ ಚೀನಾ ಫ್ರೆಂಡ್‌ಶಿಪ್‌ ಆಸ್ಪತ್ರೆಯಿಂದ ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಚೋಕ್ಸಿ ನ್ಯಾಯಾಧೀಶರ ಮುಂದೆ ಹಾಜರಾದರು. ಅವರ ವಕೀಲರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪೊಲೀಸ್‌ ಕಸ್ಟಡಿಯಲ್ಲಿ ಚೌಕ್ಸಿ ಅವರಿಗೆ ಸುರಕ್ಷಿತ ಭಾವನೆ ಇಲ್ಲ. ಹಾಗಾಗಿ ಅವರನ್ನು ಆಂಟಿಗುವಾ ಮತ್ತು ಬಾರ್ಬುಡಾಗೆ ವಾಪಸ್‌ ಕಳುಹಿಸುವಂತೆ ಚೋಕ್ಸಿ ಪರ ವಕೀಲರು ಕೋರಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚೋಕ್ಸಿ ವಿರುದ್ಧ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರಿಗೆ ಜಾಮೀನು ನೀಡಿದರೆ ಅವರು ದೇಶದಿಂದ ಪರಾರಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸರ್ಕಾರಿ ವಕೀಲರು ವಾದಿಸಿದರು.
ಚೋಕ್ಸಿ ಪರ ವಕೀಲರು ಇದನ್ನು ಅಲ್ಲಗಳೆದರು. ಜಾಮೀನಿಗೆ ಅಗತ್ಯವಿರುವಷ್ಟು ಠೇವಣಿ ಮೊತ್ತ ಹಾಗೂ ಡೊಮಿನಿಕಾಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ ಎರಡರಷ್ಟು ದಂಡ ಕಟ್ಟಲು ಸಿದ್ಧ ಇರುವುದಾಗಿ ತಿಳಿಸಿದರು. ಮೇಲಾಗಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಚೋಕ್ಸಿ ವಿರುದ್ಧ ಯಾವುದೇ ಕ್ರಿಮಿನಲ್‌ ಪ್ರಕರಣಗಳಿಲ್ಲ. ನಡೆಯುತ್ತಿರುವುದು ಸಿವಿಲ್‌ ಪ್ರಕರಣವಷ್ಟೆ ಎಂದು ವಾದಿಸಿದರು.
ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸುತ್ತಿರುವುದಾಗಿ ತಿಳಿಸಿ, ವಿಚಾರಣೆಯನ್ನು ಜೂನ್‌ 14ಕ್ಕೆ ಮುಂದೂಡಿದರು.
ಸಿಬಿಐ ಡಿಐಜಿ ನೇತೃತ್ವದ ಅಧಿಕಾರಿಗಳ ತಂಡವು ಡೊಮಿನಿಕಾಗೆ ಹೋಗಿ ಚೋಕ್ಸಿಯನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಸಿದೆ.
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (ಪಿಎನ್‌ಬಿ) ಸುಮಾರು ₹13,500 ಕೋಟಿ ವಂಚಿಸಿದ ಆರೋಪ ಚೋಕ್ಸಿ ಮೇಲಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...