ಔಷಧಿ ಸಿಗುವವರೆಗೂ ಕೊರೋನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ: ಪ್ರಧಾನಿ ಮೋದಿ ಎಚ್ಚರಿಕೆ

Source: PTI | Published on 12th September 2020, 6:48 PM | National News | Don't Miss |

ಭೋಪಾಲ್: ಭಾರತದಲ್ಲಿ ದಿನಕಳೆದಂತೆ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ, ಔಷಧಿ ಸಿಗುವವರೆಗೂ ಕೊರೋನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಮಧ್ಯಪ್ರದೇಶದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯ ಗೃಹಪ್ರವೇಶ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್ ಸೋಂಕಿಗೆ ಪರಿಣಾಮ ಔಷಧಿ ಸಿಗುವವರೆಗೂ ಜನರು ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ  ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ. ಔಷಧಿ ಸಿಗುವವರೆಗೂ ನಿರ್ಲಕ್ಷ್ಯತನ ಬೇಡ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆಯನ್ನು ತಪ್ಪದೇ ಪಾಲಿಸಿ ಎಂದು ಹೇಳಿದ್ದಾರೆ.
ಇನ್ನು ಶುಕ್ರವಾರದ ವೇಳೆಗೆ ಮಧ್ಯ ಪ್ರದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 83,619ಸಂಖ್ಯೆಗೆ ಏರಿಕೆಯಾಗಿದ್ದು, ಅಂತೆಯೇ ಈ ವರೆಗೂ 1,691 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.  

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...