ದಾಖಲೆ ನೆಪದಲ್ಲಿ ವಾಹನಗಳನ್ನು ತಡೆಯಬೇಡಿ, ತೊಂದರೆ ಕೊಡಬೇಡಿ; ಡಿಜಿಪಿ ಪ್ರವೀಣ್ ಸೂದ್

Source: Vb | By I.G. Bhatkali | Published on 30th June 2022, 12:05 AM | State News |

ಬೆಂಗಳೂರು: ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟು ಮಾಡಬಾರದೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಂಚಾರ ಪೊಲೀಸರಿಗೆ ಸೂಚಿಸಿದ್ದಾರೆ.

ಸೋಮವಾರ ವಾಹನ ಸವಾರರೊಬ್ಬರು ಟ್ವಿಟ್ ಮೂಲಕ ಪ್ರತಿಕ್ರಿಯಿಸಿ ಪೊಲೀಸರು ರಸ್ತೆಗಳಲ್ಲಿ ವಾಹನ ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ದಟ್ಟಣೆ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಪ್ರವೀಣ್ ಸೂದ್, ಕಣ್ಣಿಗೆ ಕಾಣುವಂತೆ ನಿಯಮ ಉಲ್ಲಂಘನೆಯಾದರೆ ಹಾಗೂ ಅಗತ್ಯವಿದ್ದರೆ ವಾಹನ ತಪಾಸಣೆ ಮಾಡಿ. ಆದರೆ ದಾಖಲೆ ನೆಪದಲ್ಲಿ ವಾಹನ ತಡೆಯಬೇಡಿ ಎಂದು ಹೇಳಿದರು.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿ ಹಾಗೂ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೂ ಸೂಚಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...