ಅಜ್ಜ ಮೊಮ್ಮಗಳು ಸಹಿತ ಇಬ್ಬರ ಬರ್ಬರ ಹತ್ಯೆ : ಮಹಿಳೆ ಗಂಭೀರ..!

Source: so news | Published on 20th November 2019, 12:18 AM | Coastal News | Don't Miss |

 

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕುರಿಯ ಗ್ರಾಮದ ಹೊಸ್ಮಾರು ಎಂಬಲ್ಲಿ ಸೋಮವಾರ ತಡರಾತ್ರಿ ವೇಳೆ ದುಷ್ಕರ್ಮಿಗಳು ಮೂವರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆಸಿದ್ದು, ಈ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸ್ಮಾರು ನಿವಾಸಿ ಕೊಗ್ಗು ಸಾಹೇಬ್ (62) ಹಾಗು ಅವರ ಮೊಮ್ಮಗಳು ಸಮೀಹಾ (16) ಮೃತರು. ಕೊಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ (55) ಗಂಭೀರ ಗಾಯಗಳೊಂದಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ರಾತ್ರಿ ವೇಳೆ ಮನೆಯಲ್ಲಿದ್ದ ಮೂವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು ಸಮೀಹಾ ಬಾನು ಭೀಕರವಾಗಿ ಹತರಾದರೆ ಕೊಗ್ಗು ಸಾಹೇಬರ ಪತ್ನಿ ಖದೀಜಾಬಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.
ಮಗ ರಝಾಕ್ ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ ಮೂವರು ಮಾತ್ರ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಗ ರಝಾಕ್ ಪುತ್ತೂರಿನ ಬಾಡಿಗೆ ಮನೆಯಲ್ಲಿದ್ದು ಬೆಳಿಗ್ಗೆ ಕುರಿಯಾಕ್ಕಾಗಮಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Read These Next

ಲಕ್ಷಣರಹಿತ ರೋಗಿಗಳಿಗೆ ಇನ್ಮುಂದೆ ಹೋಂ ಐಸೋಲೇಶನ್ 1ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಸಚಿವ ಶ್ರೀರಾಮುಲು

ಲಕ್ಷಣರಹಿತ ರೋಗಿಗಳಿಗೆ ಇನ್ಮುಂದೆ ಹೋಂ ಐಸೋಲೇಶನ್ 1ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಸಚಿವ ಶ್ರೀರಾಮುಲು