ಕಾರವಾರ: ಡಾ. ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ 6ನೇ ತರಗತಿಗೆ ಅರ್ಜಿ ಆಹ್ವಾನ

Source: S.O. News service | By S O News | Published on 31st July 2021, 7:21 PM | Coastal News |

ಕಾರವಾರ: ತಾಲೂಕಿನ ಶಿರಾವಾಡದ ಡಾ. ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ 5ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ಅಗಸ್ಟ್ 10 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಪ್ಟೆಂಬರ್ 16 ಕ್ಕೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಅರ್ಜಿ ಸಲ್ಲಿಸುವ ವಿಧಾನದ ಕುರಿತು ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/indexnew ಹಾಗೂ https://kreis.karnataka.gov.in/ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿರಾವಾಡದ ಡಾ. ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಮೊಬೈಲ್ ಸಂಖ್ಯೆ 8762151802 ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next