ಡಾ.ಬಿ.ಆರ್. ಅಂಬೇಡ್ಕರ್ 128ನೇ ಜಯಂತ್ಯುತ್ಸವದಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್‌ ಅಭಿಮತ

Source: so news | By MV Bhatkal | Published on 16th April 2019, 12:18 AM | Coastal News | Don't Miss |

 

ಕಾರವಾರ:ಅಂಬೇಡ್ಕರ್‌ ಅವರು ಅಪಾರ ಜ್ಞಾನ ಭಂಡಾರ ಹೊಂದಿದ್ದರು. ಅವರು ಗಳಿಸಿದ್ದು ಪುಸ್ತಕಗಳು ಹಾಗೂ ಜ್ಞಾನ ಎಂಬ ಸಂಪತ್ತನ್ನು ಮಾತ್ರ. ಸಂವಿಧಾನ ರಚಿಸುವ ಮೂಲಕ ಆ ಸಂಪತ್ತನ್ನು ಕೂಡ ದೇಶದ ಜನರಿಗೆ ಬಿಟ್ಟು ಹೋದರು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ 128ನೇ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ವಿಶ್ವ ಸಂಸ್ಥೆಯು ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಅವರನ್ನು ವಿಶ್ವ ಮಾನವರು ಎಂದು ಒಪ್ಪಿಕೊಂಡಿದೆ. ಶೋಷಿತರ ಧ್ವನಿಯಾಗಿದ್ದ ಅಂಬೇಡ್ಕರ್ ಅವರನ್ನು ಎಲ್ಲರೂ ಸದಾ ಸ್ಮರಿಸಬೇಕಿದೆ. ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದರು.

ಎಲ್ಲ ಭಾರತೀಯರಿಗೂ ಮತ ಚಲಾಯಿಸುವ ಹಕ್ಕು ನೀಡಿ, ಶ್ರೀಮಂತ, ಬಡವನೆಂಬ ಭೇದವಿಲ್ಲದ, ಒಂದು ಮತಕ್ಕೆ ಒಂದೇ ಮೌಲ್ಯ ಎಂಬ ಸಮಾನತೆ ತಂದುಕೊಟ್ಟವರು ಅಂಬೇಡ್ಕರ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂದು ಹೇಳಲಾಗುತ್ತದೆ. ಸರಿಯಾದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ಪ್ರಜೆಗಳಿಗೆ ನೀಡಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಬೇಕು’ ಎನ್ನುವ ಮೂಲಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ
ನಿರ್ವಾಹಕ ಅಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ‘ಚುನಾವಣೆಯ ರೂಪುರೇಷೆಗಳನ್ನು ರಚಿಸಿದ ಅಂಬೇಡ್ಕರ್ ಅವರ ಕನಸನ್ನು ನಾವೆಲ್ಲರೂ ನನಸಾಗಿಸಬೇಕಿದೆ.ಅದಕ್ಕಾಗಿ ಎಲ್ಲರೂ ಸಕ್ರಿಯವಾಗಿ ಮತದಾನ
ದಲ್ಲಿ ಭಾಗವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ‘ಅಂಬೇಡ್ಕರ್ ಅವರು ಕೇವಲ ಒಂದು ವರ್ಗ ಅಥವಾ ಸಮುದಾಯಕ್ಕೆ ಸೇರಿದವರಲ್ಲ. ಅವರು ದೇಶದ ಎಲ್ಲ ವರ್ಗಗಳ ಮೇರು ನಾಯಕ. ಜ್ಞಾನ ಸಂಪಾದಿಸಿ ಹಾಗೂ ಒಗ್ಗಟ್ಟಾಗಿ ಸಂಘಟನೆ ಕಟ್ಟಿಕೊಳ್ಳಿ ಎಂದು ಅವರು ಜನರಿಗೆ ಹೇಳಿದ್ದರು.ಅಂಥವರನ್ನು ಕೇವಲ ಒಂದು ದಿನಕ್ಕೆ ಸೀಮಿತ
ಗೊಳಿಸದೆ ನಿತ್ಯ ಸ್ಮರಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಪುರುಷೋತ್ತಮ್ ಕಾರ್ಯಕ್ರಮ ನಿರೂಪಿಸಿದರು.ಸಹಾಯಕ ನಿರ್ದೇಶಕ ಪ್ರವೀಣ ಪಾಟೀಲ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಹಿಮಂತರಾಜು 
ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ಬಸವರಾಜ ಬಡಿಗೇರ ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...