ಅತ್ಯುತ್ತಮ ಇಎಲ್‍ಸಿ ರಾಜ್ಯ ಪ್ರಶಸ್ತಿ ಪಡೆದ ಡಾ.ಎಸ್.ಮಂಜಪ್ಪ

Source: so news | Published on 28th January 2020, 12:20 AM | State News | Don't Miss |


ದಾವಣಗೆರೆ:ದಾವಣಗೆರೆಯ ಯು.ಬಿ.ಡಿ.ಟಿ ಇಂಜಿನಿಯರಿಂಗ್ ಕಾಲೇಜನ್ನು ಕರ್ನಾಟಕ ರಾಜ್ಯದ ಅತ್ಯುತ್ತಮ ಮತದಾರ ಸಾಕ್ಷರತಾ ಸಂಘ(ಇಎಲ್‍ಸಿ) ಎಂದು ಪರಿಗಣಿಸಿ ಭಾರತ ಚುನಾವಣಾ ಆಯೋಗವು ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಎಲೆಕ್ಟರಲ್ ಲಿಟರಸಿ ಕ್ಲಬ್‍ನ ನೋಡಲ್ ಅಧಿಕಾರಿ ಡಾ.ಎಸ್.ಮಂಜಪ್ಪ ಇವರು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಹಾಗೂ ಚುನಾವಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಇವರಿಗೆ ರಾಜ್ಯ ಪ್ರಶಸ್ತಿ ನೀಡಲಾಯಿತು.
ಜ.25 ರಂದು ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಪುರಭವನದಲ್ಲಿ ನಡೆದ ರಾಜ್ಯಮಟ್ಟದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲ ಅವರು ಪ್ರಶಸ್ತಿ ವಿಜೆತ ಮಂಜಪ್ಪ ಅವರನ್ನು ಸನ್ಮಾನಿಸಲಾಯಿತು

Read These Next

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಅರ್ಜಿ ಆಹ್ವಾನ                                                         

ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ...