ರಂಗಕರ್ಮಿ, ಪತ್ರಕರ್ತ ಕೆ ಆರ್ ಪ್ರಕಾಶ ನಿಧನ

Source: SO News | By Laxmi Tanaya | Published on 19th November 2020, 9:24 AM | State News | Don't Miss |

ಶಿರಸಿ : ಉತ್ತರಕನ್ನಡ ಜಿಲ್ಲೆಯ ರಂಗನಟ, ನಿರ್ದೇಶಕ ಶಿರಸಿಯ ಕೆ.ಆರ್.ಪ್ರಕಾಶ ಬುಧವಾರ ರಾತ್ರಿ ಅನಾರೋಗ್ಯದಿಂದ  ನಿಧನರಾಗಿದ್ದಾರೆ.

ಅವರು ಪ್ರಸ್ತುತ  ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿದ್ದರು.
ಚಿಕ್ಕ ವಯಸ್ಸಿನಲ್ಲಿ ರಂಗಭೂಮಿಯ ಗೀಳು ಹತ್ತಿಸಿಕೊಂಡಿದ್ದ ಪ್ರಕಾಶ ಉತ್ತಮ ನಟರಾಗಿದ್ದರು.‌ ಅವರು ತಮ್ಮದೇ ಆದ ವಿಶಿಷ್ಠ ಶೈಲಿಯಲ್ಲಿ ನಾಟಕಗಳನ್ನ ರಚಿಸಿ ಮನೆಮಾತಾದವರು.

 ಹಳ್ಳಿಗಳ ತಂಡಗಳ ಜೊತೆ ನಾಟಕವಾಡುತ್ತ ಶಿರಸಿಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ರಂಗಾಸಕ್ತಿ ಬೆಳೆಯಲು ಪ್ರಮುಖ ಕಾರಣರಾಗಿದ್ದರು.
'ಪ್ರಕೃತಿ ರಂಗಭೂಮಿ' ಯಲ್ಲಿ ಹಲವಾರು ಸಾಹಸಗಳನ್ನ ಮಾಡಿದ ಪ್ರಕಾಶ್ ನಿಸರ್ಗ ಮತ್ತು ರಂಗಭೂಮಿಗಳು ಲೀನವಾಗಬಹುದಾದ  ಸಾಧ್ಯತೆಗಳ ಕುರಿತು ಯೋಚಿಸುತ್ತಿದ್ದರು. ಹಾಗೆಯೇ ಸಮುದ್ರ ದಡದಲ್ಲಿ, ಜಲಪಾತದೆದುರು, ಪ್ರಪಾತದಲ್ಲಿ ಹೀಗೆ ಹಲವಾರು ಪ್ರಯೋಗಗಳನ್ನು ಮಾಡಿದ್ದರು. 

ಮತ್ತಿಘಟ್ಟದ ಗೆಳೆಯರೊಡನೆ ಅವರು ಅನೇಕ ಪ್ರಯೋಗಗಳನ್ನ ಮಾಡಿದ್ದರು. ಅವರ ಹೆಸರಿನ ಪ್ರಶಸ್ತಿಯನ್ನು ರಂಗಭೂಮಿಯ ಅನೇಕ ಹಿರಿಯರು  ಸ್ವೀಕರಿಸಿದ್ದರು.

ಶಿರಸಿಯ 'ರಂಗಸಂಗ' ಕ್ಕಾಗಿಯೂ ಮಕ್ಕಳ ನಾಟಕಗಳನ್ನು ನಿರ್ದೇಶಿಸಿದ್ದರು.‌ ಇನ್ನೂ ಹಲವು ವರ್ಷ ರಂಗಕಾಯಕ ಮಾಡಬಹುದಾಗಿದ್ದ ಪ್ರಕಾಶ್ ಅನಾರೋಗ್ಯ ದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ 
ಚಿಂತನ ರಂಗ ಅಧ್ಯಯನ ಕೇಂದ್ರ‌ ಮತ್ತು ಚಿಂತನ ಉತ್ತರ ಕನ್ನಡ ಸಂತಾಪ ಸೂಚಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...