ಕರಾವಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ! ಬತ್ತುತ್ತಿವೆ ಜಲಮೂಲಗಳು, ಅಂತರ್ಜಲ ಮಟ್ಟ ಪಾತಾಳಕ್ಕೆ

Source: Vb | By I.G. Bhatkali | Published on 4th May 2023, 8:29 AM | Coastal News | State News |

ಮಂಗಳೂರು: ಬಿಸಿಲಿನ ಬೇಗೆಯ ಜೊತೆಗೆ ರಾಜ್ಯಾದ್ಯಂತ ಚುನಾವಣೆಯ ಕಾವು ಏರುತ್ತಿದೆ. ಇದೇ ಸಂದರ್ಭದಲ್ಲಿ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿದ್ದು, ಜನರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ 46 ಗ್ರಾಮಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಎರಡು ದಿನಕ್ಕೊಮ್ಮೆ ಅರ್ಧ ಗಂಟೆ ನೀರು ಪೂರೈಕೆಯಾಗುತ್ತಿದೆ.

ಉಡುಪಿ ಜಿಲ್ಲೆಯ ಕಾಪು, ಬ್ರಹ್ಮಾವರ, ಕಾರ್ಕಳ, ಹೆಬ್ರಿ, ಬೈಂದೂರು ಹಾಗೂ ಕುಂದಾಪುರ ತಾಲೂಕುಗಳ ಗ್ರಾಮೀಣ ಭಾಗದಲ್ಲಿ ಈಗಾಗಲೇ ನೀರಿನ ಸಮಸ್ಯೆ ಉದ್ಭವಗೊಂಡಿದೆ. ವಿವಿಧ ಗ್ರಾಪಂಗಳಿಂದ ಟ್ಯಾಂಕರ್ ನೀರಿಗೆ ಬೇಡಿಕೆಗಳು ಕೇಳಿ ಬಂದಿದ್ದು, ಈ ತಿಂಗಳಿನಲ್ಲಿ ಬೇಡಿಕೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಜಿಲ್ಲೆಯ ಒಟ್ಟು 155 ಗ್ರಾಮ ಪಂಚಾಯತ್ ಗಳ ಪೈಕಿ ಕೋಟೆ, ನೀರೆ, ಕಟಪಾಡಿ, ಮುದ್ರಾಡಿ, ಪೆರ್ಡೂರು, ಬೊಮ್ಮಾರಬೆಟ್ಟು, ಐರೋಡಿ ಸೇರಿದಂತೆ 46 ಗ್ರಾಪಂಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿವೆ.

ದ.ಕ. ಜಿಲ್ಲಾದ್ಯಂತ ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಡಳಿತ ಪ್ರಥಮ ಆದ್ಯತೆ ನೀಡಿದೆ. ಹಾಗಾಗಿ ಕುಡಿಯುವ ನೀರು ಹೊರತುಪಡಿಸಿ ಇತರ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿಲ್ಲವೆಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಹಾಗೂ ಬಯಲು ಭಾಗದಲ್ಲಿ ನೀರಿಗೆ ಹಾಹಾಕಾರ ಉಂಟಾಗಿರುವ ಗ್ರಾಮಗಳ ಪಟ್ಟಿಯನ್ನು ಜಿಲ್ಲಾಡಳಿತ ತಯಾರಿಸಿದೆಯಾದರೂ ಚುನಾವಣೆ ಕೆಲಸದ ಒತ್ತಡದಿಂದಾಗಿ ಈ ಗ್ರಾಮಗಳಿಗೆ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸುವಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿರುವ 86 ಗ್ರಾಮಗಳನ್ನು ಜಿಲ್ಲಾಡಳಿತ ಪಟ್ಟಿ ಮಾಡಿದೆ. ಅದರಂತೆ ತರೀಕೆರೆ ತಾಲೂಕಿನ 5 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದ್ದರೆ, ಚಿಕ್ಕಮಗಳೂರು ತಾಲೂಕಿನಲ್ಲಿ 10, ಕೊಪ್ಪ 28, ಕಡೂರು 17, ಮೂಡಿಗೆರೆ 7, ಶೃಂಗೇರಿ 4 ಹಾಗೂ ನರಸಿಂಹರಾಜಪುರದ 14 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಈ ಗ್ರಾಮಗಳ ಪೈಕಿ ಕೆಲ ಗ್ರಾಮಗಳಲ್ಲಿ ಟೆಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದರೆ ಮತ್ತೆ ಕೆಲ ಗ್ರಾಮಗಳಿಗೆ ಬೋರ್‌ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

ಆದರೆ, ವಾರದಲ್ಲಿ 2-3 ದಿನ ಮಾತ್ರ ನೀರು ಪೂರೈಕೆ ಮಾಡುತ್ತಿರುವುದರಿಂದ ಗ್ರಾಮಸ್ಥರಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಾಗದಂತಾಗಿದೆ. ಅಲ್ಲದೆ ಚುನಾವಣೆ ಕೆಲಸದ ಒತ್ತಡದಿಂದಾಗಿ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳು ನೀರಿನ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.

ಕಾರವಾರ, ಅಂಕೋಲಾ ನಗರ ಹಾಗೂ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಗಂಗಾವಳಿ, ಕುಮಟಾ, ಹೊನ್ನಾವರಕ್ಕೆ ನೀರು ಪೂರೈಸುವ ಅಘನಾಶಿನಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಶಿರಸಿ ನಗರಕ್ಕೆ ನೀರು ಪೂರೈಸುವ ಕೆಂಗೆ ಹೊಳೆ ಹರಿವು ನಿಲ್ಲಿಸಿದೆ. ಭಟ್ಕಳದಲ್ಲಿ ಕಡವಿನಕಟ್ಟಾ ಡ್ಯಾಮ್ನನಲ್ಲಿ ನೀರು ಕಡಿಮೆಯಾಗಿದೆ. ಸದ್ಯಕ್ಕೆ ಎಲ್ಲ ನಗರಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗದಿದ್ದರೂ ಇದೇ ವಾತಾವರಣ ಮುಂದುವರಿದರೆ ಮೇ ತಿಂಗಳಲ್ಲಿ ಎಲ್ಲೆಡೆ ನೀರಿನ ಅಭಾವವಾಗುವ ಲಕ್ಷಣ ಕಾಣುತ್ತಿದೆ.

ಕಳೆದ ಬಾರಿ ಉತ್ತರ ಕನ್ನಡ ಜಿಲ್ಲೆಯ 111 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿತ್ತು. ಈ ಬಾರಿ ಜಿಲ್ಲೆಯ 101 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಅಂದಾಜಿಸಿದೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...