ಕೋಲಾರ : ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Source: ಶಬ್ಬೀರ್ ಅಹಮ್ಮದ್ | By I.G. Bhatkali | Published on 15th May 2021, 7:33 PM | State News | Don't Miss |

ಕೋಲಾರ : ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ, ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.

ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರ ಪತ್ರಕರ್ತರನ್ನು ಪ್ರಂಟ್‌ಲೈನ್ ವರ್ಕರ್ ಎಂದು ಘೋಷಿಸಿರುವುದು ಸಂತೋಷದ ವಿಷಯವಾಗಿದೆ. ಎಲ್ಲಾ ಪತ್ರಕರ್ತರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಇದರ ಸದುಪಯೋಗವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇದುವರೆಗೆ 140 ಪತ್ರಕರ್ತರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು .

ಜಿಲ್ಲಾಧಿಕಾರಿಗಳಾದ ಡಾ || ಆರ್. ಸೆಲ್ವಮಣಿ ಅವರು ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ನೀಡುವುದರ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ. ಮುನಿರಾಜು, ಪ್ರಧಾನ ಕಾರ್ಯದರ್ಶಿ ಎಸ್. ಕೆ. ಚಂದ್ರಶೇಖರ್,  ಖಜಾಂಚಿ ಎ.ಜಿ.ಸುರೇಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

Read These Next

ಕೋಲಾರ: ಡಿಸಿಸಿ ಬ್ಯಾಂಕ್ ಮೊಬೈಲ್ ಬ್ಯಾಂಕಿಂಗ್ ಸೇವೆಯ ಅನಾವರಣ, ಸಮಾಜದ ಕಟ್ಟಕಡೆ ವ್ಯಕ್ತಿಗೂ ಸೇವೆ; ಬ್ಯಾಲಹಳ್ಳಿ ಗೋವಿಂದಗೌಡ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಡಿಜಟಲೀಕರಣದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ...

ಬೆಂಗಳೂರು: ಕೋವಿಡ್ 3ನೇ ಅಲೆ ಆತಂಕ, ಮಧ್ಯಂತರ ವರದಿ ಸಲ್ಲಿಸಿದ ತಜ್ಞರ ಸಮಿತಿ, ಹಂತ ಹಂತವಾಗಿ ಶಾಲಾ-ಕಾಲೇಜು ತೆರೆಯಲು ಶಿಫಾರಸು

ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ...

ಶ್ರೀನಿವಾಸಪುರ: ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.

ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು. ...

ಕೋಲಾರ: ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ, ಸಚಿವರಿಗೆ ಮನವಿ ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಿ -ಡಾ ವೈ.ಎ. ನಾರಾಯಣಸ್ವಾಮಿ

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಡೀ ದಿನ ಲಾಕ್ ಡೌನ್ ಸಡಿಲಿಸಬೇಕು. ಮಾಜಿ ಶಾಸಕ ಐವಾನ್ ಡಿಸೋಜಾ ಆಗ್ರಹ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಇಡೀ ದಿನ ಸಡಿಲಿಕೆ ಮಾಡಬೇಕು. ತಕ್ಷಣ ಬಸ್ ಸಂಚಾರ ಆರಂಭಿಸಬೇಕು. ಎಲ್ಲರಿಗೆ ಲಸಿಕೆ ...

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

ಮಂಗಳೂರು: ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ , ...