ಕಾರವಾರ:ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ 

Source: S.O. News Service | By MV Bhatkal | Published on 18th July 2019, 6:54 PM | Coastal News | Don't Miss |

ಕಾರವಾರ:ದಿನಾಂಕ 15-07-2019 ರಿಂದ 27-07-2019 ವರೆಗೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ, ಬೈತಖೋಲ್ ಹರಿಕಂತ್ರ ಮೀನುಗಾರರ ಸೇವಾ  ಸಂಘ ಬೈತಖೋಲ್,ಕಾರವಾರದಲ್ಲಿ ಚಾಲನೆ ನೀಡಲಾಯಿತು. 
ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ನಿತಿನ್ ಪಿಕಳೆ, ರವರು 2025 ರ ಒಳಗಾಗಿ ಕ್ಷಯರೋಗ ಮುಕ್ತ ಭಾರತವನ್ನು ಮಾಡಲು ಭಾರತ ಸರಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಅದರ ಅಂಗವಾಗಿ ರಾಜ್ಯಾದಂತ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು. ಉತ್ತರಕನ್ನಡ ಜಿಲ್ಲೆಯಲ್ಲಿಯೂ ಆಂದೋಲನ ಹಮ್ಮಿಕೊಳ್ಳಲಾಗಿದ್ದು ಸದರಿ ಆಂದೋಲನದ ಸಮಯದಲ್ಲಿ ಸಮೀಕ್ಷೆಗೆ ಮನೆ ಬೇಟಿ ನೀಡುವ ಆರೋಗ್ಯ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕ್ಷಯರೋಗದ ಲಕ್ಷಣಗಳಿದ್ದಲ್ಲಿ ಮಾಹಿತಿ ನೀಡಲು ಹಾಗೂ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಸಹಕರಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಜಿ.ಎನ್.ಅಶೋಕ ಕುಮಾರ್ ರವರು ಸಕ್ರೀಯ ಕ್ಷಯ ಪತ್ತೆ ಆಂದೋಲನದಲ್ಲಿ  ಕೊಳಚೆ ಪ್ರದೇಶದ ನಿವಾಸಿಗಳು(ಸ್ಲಮ್), ಜೈಲು(ಕೈದಿಗಳು) ವೃದ್ದಾಪ್ಯ ಕೇಂದ್ರಗಳು, ಕಟ್ಟಡ ನಿರ್ಮಾಣ ಕಾರ್ಮಿಕರು, ನಿರಾಶ್ರಿತರ ಶಿಬಿರಗಳು, ವಸತಿ ಇಲ್ಲದವರು ಬೀದಿ ಮಕ್ಕಳು, ಅನಾಥಾಶ್ರಮಗಳು, ಅಸಂಘಟಿತ ಕಾರ್ಮಿಕರು, ಅಪೌಷ್ಟೀಕತೆ ಹೆಚ್ಚಿರುವ ಪ್ರದೇಶಗಳ ನಿವಾಸಿಗಳನ್ನು ಹಾಗೂ ಕ್ಷಯರೋಗಕ್ಕೆ ತುತ್ತಾಗಬಹುದಾದ ಅಪಾಯದಲ್ಲಿರುವ ಜನರನ್ನು ಉದ್ದೇಶಿತ ಗುಂಪುಗಳಾಗಿ ಗುರುತಿಸಿ ಮನೆ ಮನೆ ಸಮೀಕ್ಷೆ ಮಾಡಲಾಗುತ್ತಿದೆ ಹಾಗೂ ರೋಗ ಲಕ್ಷಣಗಳನ್ನು ಹೊಂದಿದ ಶಂಕಿತರಿಗೆ ಕಫ ಪರೀಕ್ಷೆ ಹಾಗೂ ಇತರ ಅವಶ್ಯ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು ಮತ್ತು ಕ್ಷಯರೋಗ ಕಂಡು ಬಂದಲ್ಲಿ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು. ಕ್ಷಯರೋಗವನ್ನು ಆರಂಭದ ಹಂತದಲ್ಲಿಯೆ ಕಂಡು ಹಿಡಿದು ಚಿಕಿತ್ಸೆ ನೀಡಿ, ಆ ಮೂಲಕ ಕ್ಷಯರೋಗ ಹರಡದಂತೆ ನಿಯಂತ್ರಿಸುವುದು ಸದರಿ ಆಂದೋಲನದ ಉದ್ದೇಶವಾಗಿದೆ ಎಂದು ತಿಳಿಸಿದರು, ಸಾರ್ವಜನಿಕರು ಸದರಿ ಆಂದೋಲನದ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳಾದ ಡಾ. ಮಹಾಬಲೇಶ್ವರ್ ಹೆಗಡೆ ರವರು ಪರೀಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ  ಸಕ್ರೀಯ ಕ್ಷಯರೋಗ ಪತ್ತೆ  ಆಂದೋಲನದ ಉದ್ದೇಶ, ರೂಪರೇಷೆಗಳು ಹಾಗೂ ಕ್ಷಯರೋಗ ನಿಯಂತ್ರಣ ಕುರಿತು ಪ್ರಾsಸ್ಥಾವಿಕವಾಗಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶ್ರೀ ಎಸ್.ಜಿ. ನಾಯ್ಕರವರು, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ಛಾಯಾ ಜಾವಕರ್, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಸೂರಜ್ ನಾಯಕ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಶಗುಪಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...