ಬಾಲಕಾರ್ಮಿಕ ನಿರ್ಮೂಲನೆಗೆ ಅರಿವು ಮೂಡಿಸುವ “ಆಟೋ ಪ್ರಚಾರಕ್ಕೆ"ಚಾಲನೆ

Source: so news | Published on 5th July 2020, 12:02 AM | State News | Don't Miss |

 

 


ಕಲಬುರಗಿ:ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬಾಲಕಾರ್ಮಿಕ ನಿರ್ಮೂಲನೆಗೆ ಅರಿವು ಮೂಡಿಸುವ “ಆಟೋ ಪ್ರಚಾರ” ಕಾರ್ಯಕ್ರಮಕ್ಕೆ ಕಾಳಗಿ ತಹಶೀಲ್ದಾರರಾದ ನೀಲಪ್ರಭಾ ಬಬಲಾದ ಅವರು ಕಾಳಗಿ ತಹಶೀಲ್ದಾರರ ಕಾರ್ಯಾಲಯದ ಅವರಣದಲ್ಲಿ  ಶುಕ್ರವಾರ ಚಾಲನೆ ನೀಡಿ, ನಂತರ ಕರಪತ್ರ ಮತ್ತು ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು. 
ಕಾಳಗಿ ತಾಲೂಕಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ, ಮಕ್ಕಳ ಸಹಾಯವಾಣಿ-1098 ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ" ಅಂಗವಾಗಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾರೂ ಕೆಲಸಕ್ಕೆ ಇಟ್ಟುಕೊಳ್ಳಬಾರದು. ಒಂದು ವೇಳೆ ಯಾರಾದರೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಆಟೋ ಪ್ರಚಾರಕ್ಕೆ ಮೂಲಕ ಸಾರ್ವನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು. 
ಕಲಬುರಗಿ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ, ಪ್ರಕ್ರಿಯೆಗಳಲ್ಲಿ ಹಾಗೂ 18 ವರ್ಷದೊಳಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ (ಫ್ಯಾಕ್ಟರಿ, ಮೈನ್ಸ್, ಕೇಮಿಕಲ್ಸ್ ಮತ್ತು ಎಕ್ಸಪ್ಲೋಜಿವ್) ದುಡಿಯುವುದು  ಕಂಡು ಬಂದಲ್ಲಿ  ಚೈಲ್ಡ್ ಲೈನ್-1098 ಅಥವಾ ದೂರವಾಣಿ ಸಂಖ್ಯೆ 080-22453549, 08472-256295, 269347,  275278 ಗಳಿಗೆ ಸಂಪರ್ಕಿಸಬೇಕೆಂದರು. 
ಕಾರ್ಯಕ್ರಮದಲ್ಲಿ ಕಲಬುರಗಿ ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕರಾದ ವಿಠ್ಠಲ ಚಿಕಣಿ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರೇಡ್-2 ತಹಶೀಲ್ದಾರ ಶಾಂತಗೌಡ, ಕಾಳಗಿ ಎ.ಎಸ್.ಐ.ರಾದ ಎಸ್.ಎ. ಪಾಟೀಲ ಉಪಸ್ಥಿತರಿದ್ದರು. ಕೊನೆಯಲ್ಲಿ ಮಾರ್ಗದರ್ಶಿ ಸಂಸ್ಥೆಯ ಸಂಯೋಜಕರಾದ ಸುಂದರಾಜ್ ಅವರು ವಂದಿಸಿದರು.

Read These Next

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...