ಕಾನೂನು ಅರಿವು ವಿಶೇಷ ಪ್ರಚಾರಾಂದೋಲನ ಕಾರ್ಯಕ್ರಮಕ್ಕೆ ಚಾಲನೆ

Source: SO News | By Laxmi Tanaya | Published on 18th September 2021, 12:00 AM | State News | Don't Miss |

ಹಾಸನ - ದುರ್ಬಲರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು, ಮಹಿಳೆಯರು, ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರು  ಮತ್ತಿತರರು ಉಚಿತವಾಗಿ ಕಾನೂನು ಸೇವೆ ಪಡೆಯಲು ಅರ್ಹರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಸನ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ಕಾನೂನು ಸೇವೆಗಳ ಕುರಿತು ವಿಶೇಷ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ದೊರೆಯುವ ಸೌಲಭ್ಯದ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಶಿವಣ್ಣ ಅವರು ಮಾತನಾಡಿ ಕಾನೂನಿನಿಂದ ದೊರೆಯುವ ಸವಲತ್ತುಗಳು ಪ್ರತಿಯೊಬ್ಬರಿಗೂ ತಲುಪಬೇಕೆಂಬ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಜೊತೆಗೆ ಬಾಕಿ ಇರುವ ಹಳೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವಂತಹ ಕಾರ್ಯವನ್ನೂ ನಡೆಸಲಾಗುತ್ತಿದೆ ಎಂದರು.

  ವ್ಯಾಪಕವಾಗಿ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳದೆ ಇರುವ ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.

ಸೆ. 30 ರಂದು ನಡೆಯುವ ಮೆಗಾ ಲೋಕ್ ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಬಹುದಾದ ಸಿವಿಲ್ ಪ್ರಕರಣಗಳು, ಹಳೆ ಪ್ರಕರಣಗಳು, ತ್ವರಿತವಾಗಿ ಬಗೆಹರಿಸುವಂತಹ ಪ್ರಕರಣಗಳು ಸೇರಿದೆ ಹೆಚ್ಚು ಪ್ರಕರಣಗಳನ್ನು ಗುರುತಿಸಿ ಇತ್ಯರ್ಥ ಪಡಿಸಲಾಗುವುದು ಇದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಅಗತ್ಯ ಎಂದರು.

 ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಬಗ್ಗೆ  ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಯವರ ಸಹಕಾರ ಮುಖ್ಯ ಎಂದು  ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ ರವಿಕಾಂತ್ ಅವರು ಮಾತನಾಡಿ, ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಳ್ಳಿಗಳಲ್ಲಿಯೂ ಸಹ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ. ಎನ್. ನಂದಿನಿ ಅವರು ಸೆಪ್ಟೆಂಬರ್ 30 ರಂದು ನಡೆಯುವ ಮೆಗಾ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮಲ್ಲಿ ಇರುವಂತಹ ಹಲವಾರು ಪ್ರಕರಣಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರಲ್ಲದೆ ಎಲ್ಲಾ ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಜಾಗೃತರಾಗಬೇಕು ಎಂದು  ತಿಳಿಸಿದರು.

ವಕೀಲರ ಸಂಘದ ಪದಾಧಿಕಾರಿಗಳಾದ ಹೆಚ್.ಎಸ್ ಮಂಜುನಾಥ್ ಮೂರ್ತಿ, ರಂಗನಾಥ್ ಹಾಗೂ ಮತ್ತಿತರರು ಹಾಜರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...