ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿ ಪ್ರಕರಣಗಳ ದಾಖಲು ಕೂಡಲೇ ಹಿಂಪಡೆಯಿರಿ; ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ನಿರ್ದೇಶ

Source: VB news | By I.G. Bhatkali | Published on 16th July 2021, 4:21 PM | National News |

ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ರದ್ದುಗೊಳಿಸಲಾದ ಸೆಕ್ಷನ್ 66 ಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ.

ಸೆಕ್ಷನ್ 66 ಎಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದ 6 ವರ್ಷದ ಬಳಿಕವೂ ಈ ಸೆಕ್ಷನ್ ಅನ್ನು ಹೇರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಆಘಾತ ವ್ಯಕ್ತಪಡಿಸಿದ ಕೆಲವು ದಿನಗಳ ಬಳಿಕ ಕೇಂದ್ರ ಗೃಹ ಸಚಿವಾಲಯ ಈ ನಿರ್ದೇಶನ ನೀಡಿದೆ.

ಶ್ರೇಯಾ ಸಿಂಘಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ 2015 ಮಾರ್ಚ್ 24ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ದ ಸೆಕ್ಷನ್ 66 ಎಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಅಲ್ಲದೆ, ಈ ಸೆಕ್ಷನ್ ಅಸಾಂವಿಧಾನಿಕ

ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಅಭಿಪ್ರಾಯಿಸಿತ್ತು. ಈ ಸೆಕ್ಷನ್ ಅಡಿಯಲ್ಲಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆ 'ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (ಪಿಯುಸಿಎಲ್) ಸಲ್ಲಿಸಿದ ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಎಫ್. ನಾರಿಮನ್, ಕೆ.ಎಂ. ಜೋಸೆಫ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ, ಈ ಸೆಕ್ಷನ್ ಅನ್ನು ಜನರ ಮೇಲೆ ಈಗಲೂ ಹೇರುತ್ತಿರುವುದು 'ಆಘಾತಕಾರಿ' ಹಾಗೂ 'ಭಯಾನಕ' ಎಂದು ಹೇಳಿತ್ತು.

ಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ಅನುಸರಿಸಲು ಜಾರಿ ಸಂಸ್ಥೆಗಳನ್ನು ಜಾಗೃತಗೊಳಿಸುವಂತೆ ಕೂಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...