ಬರ ನಿರ್ವಹಣೆಯಲ್ಲಿ ಇಲಾಖೆಗಳ ನಡುವೆ ಸಮನ್ವಯ ಅಗತ್ಯ : ಜಿಲ್ಲಾಧಿಕಾರಿ

Source: so news | By MV Bhatkal | Published on 5th April 2019, 12:22 AM | State News | Don't Miss |


ಹಾಸನ:ಜಿಲ್ಲೆಯಲ್ಲಿ ಬರಪರಿಸ್ಥಿತಿ ನಿಭಾಯಿಸಲು ಎಲ್ಲಾ ಇಲಾಖೆಗಳು ಪರಸ್ಪರ ಪೂರಕ ಸಹಕಾರ ಸಮನ್ವಯದೊಂದಿಗೆ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬರ ನಿರ್ವಹಣೆ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಇಲಾಖೆಗಳು ತಾಲ್ಲೂಕುವಾರು ಬರ ಪರಿಸ್ಥಿತಿಯ ಸೂಕ್ಷ್ಮ ಅವಲೋಕನ ಮಾಡಿ ಸಮಸ್ಯೆಗಳ ತೀವ್ರ ಸ್ವರೂಪ ತಲುಪುವ ಮುನ್ನವೇ ನಿಭಾಯಿಸಿ ಎಂದು ಅವರು ಹೇಳಿದರು.
ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್‍ನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅಗತ್ಯವಿರುವೆಡೆ ಕೊಳವೆ ಬಾವಿ ಕೊರೆಯಿರಿ ಮತ್ತು ಪ್ರಕೃತಿ ವಿಕೋಪ ನಿಧಿಯಲ್ಲಿ ಪೈಪ್‍ಲೈನ್, ಪಂಪ್ ಮೋಟಾರ್ ಅಳವಡಿಕೆ ಮಾಡಿ ಒಟ್ಟಾರೆ ಯಾವುದೇ ಗ್ರಾಮಕ್ಕೂ ಶುದ್ದ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮವಹಿಸಿ ಎಂದು ಪ್ರಿಯಾಂಕ ಮೇರಿ ಫ್ರಾನ್ಸಿಸ್ ನಿರ್ದೇಶನ ನೀಡಿದರು.
ಕುಡಿಯುವ ನೀರು, ಕೃಷಿ, ತೋಟಗಾರಿಕೆ, ಪಶುಪಾಲನೆ ಇಲಾಖೆಗಳು ಬರನಿರ್ವಹಣೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್. ವಿಜಯಪ್ರಕಾಶ್ ಅವರು ಮಾತನಾಡಿ ಬರಪರಿಸ್ಥಿತಿ ನಿರ್ವಹಣೆ ಜೊತೆಗೆ ಜಲಸಂರಕ್ಷಣೆಗೂ ಆದ್ಯತೆ ನೀಡಬೇಕಾಗಿದೆ. ಹೀಗಾಗಿ ಜಲಾಮೃತ ಯೋಜನೆಯನ್ನು ಪ್ರತಿ ಗ್ರಾಮಗಳಲ್ಲಿ ಪರಿಣಾಮಕಾರಿಯಾಗಿ ಜಾರಿ ತನ್ನಿ ಎಂದರು.
ಉದ್ಯೋಗ ಖಾತರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಹೊಂಡ, ಜಲ ಮರು ಪೂರಣ. ಇಂಗು ಕಟ್ಟೆಗಳ ನಿಮಾರ್ಣದಂತಹ ಕೆಲಸ ಮಾಡಬೇಕು. ಅರಣ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಈ ವರ್ಷ ಉದ್ಯೋಗ ಖಾತರಿ ಯೋಜನೆಯಿಂದ ನಿಗದಿತ ಗುರಿಯ ಕಾಮಗಾರಿಗಳನ್ನು ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅಸೀಕೆರೆ, ಚನ್ನರಾಯಪಟ್ಟಣ, ಬೇಲೂರು ತಾಲ್ಲೂಕುಗಳ 56 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ. ಮುಂದೆ ಇನ್ನಷ್ಟು ಹಳ್ಳಿಗಳು ಈ ಪಟ್ಟಿಗೆ ಸೇರ್ಪಡೆಯಾಗಬಹುದು ಆದರೆ ಯಾವುದಾದರೂ ಮೂಲಗಳಿಂದ ಇಲ್ಲಿಗೆ ನೀರು ಪೂರೈಸಬೇಕು ಎಂದು ಸೂಚನೆ ನೀಡಿದರು.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಕುಡಿಯುವ ನೀರು ಪೂರೈಕೆ ಬಗ್ಗೆ ಅತ್ಯಂತ ಎಚ್ಚರಿಕೆ ವಹಿಸಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಿ.ಡಿ.ಓಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಆನಂದ್ ಅವರು ಮಾತನಾಡಿ ಟಾಸ್ಕ್‍ಪೋರ್ಸ್ 1ರಲ್ಲಿ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ಮತ್ತು ಬೇಲೂರು ತಾಲ್ಲೂಕುಗಳಲ್ಲಿ 124 ಕಾಮಗಾರಿ ಕೈಗೊಳ್ಳಲಾಗಿದೆ. ಟಾಸ್ಕ್‍ಪೋಸ್ 2ರಲ್ಲಿ 337 ಕಾಮಗಾರಿ ಕೈಗೆತ್ತಿಕೊಲ್ಳಲಾಗಿದ್ದು 197 ಕಾಮಗಾರಿ ಪೂರ್ಣಗೊಂಡಿದೆ. ಸದ್ಯದ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆ ಆಧಾರಿಸಿ ಟಾಸ್ಕ್‍ಪೊರ್ಸ್ 3ರಲ್ಲಿ ಕಾಮಗಾರಿ ಕ್ಯಗೆತ್ತಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸಾಮಿ ಅವರು ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...