ಕಬಡ್ಡಿ ಮಾಸ್ಟರ್ಸ್: ಪಾಕನ್ನು ಬಗ್ಗು ಬಡಿದ ಭಾರತ

Source: sonews | By Staff Correspondent | Published on 26th June 2018, 12:20 AM | Gulf News | Sports News | Don't Miss |

ದುಬೈ, : ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 41-17 ಅಂಕಗಳ ಅಂತರದಿಂದ ಮಣಿಸಿದ ವಿಶ್ವ ಚಾಂಪಿಯನ್ ಭಾರತ ತಂಡ ಕಬಡ್ಡಿ ಮಾಸ್ಟರ್ಸ್ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಸೋಮವಾರ ನಡೆದ ಪಂದ್ಯದಲ್ಲಿ ಸ್ಟಾರ್ ರೈಡರ್‌ಗಳು ಹಾಗೂ ಡಿಫೆಂಡರ್‌ಗಳ ದಿಟ್ಟ ಪ್ರದರ್ಶನ ನೆರವಿನಿಂದ ಭಾರತ ತಂಡ ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿತು.

ನಾಯಕ ಅಜಯ್ ಠಾಕೂರ್ ಅವರು ರೋಹಿತ್ ಕುಮಾರ್ ಹಾಗೂ ಮೋನು ಗೊಯತ್ ಜೊತೆಗೂಡಿ ರೈಡ್ ಪಾಯಿಂಟ್ಸ್ ಪಡೆದು ಭಾರತಕ್ಕೆ ಭರ್ಜರಿ ಜಯ ತಂದುಕೊಟ್ಟರು. 23ನೇ ನಿಮಿಷದಲ್ಲಿ ರೈಡ್‌ನಲ್ಲಿ 2 ಅಂಕ ಗಳಿಸಿದ ಕನ್ನಡಿಗ ರಿಶಾಂಕ್ ದೇವಾಡಿಗ ಭಾರತಕ್ಕೆ 20-11 ಲೀಡ್ ಒದಗಿಸಿಕೊಟ್ಟರು. 32ನೇ ನಿಮಿಷದಲ್ಲಿ 13-30 ಹಿನ್ನಡೆಯಲ್ಲಿದ್ದ ಪಾಕ್ ಮತ್ತೆ ಚೇತರಿಸಿಕೊಳ್ಳಲಿಲ್ಲ.

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...