ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ, ಮಹಿಳೆಯರಿಗೆ ಬಲ ತುಂಬೋಣ: ರಾಷ್ಟ್ರಪತಿ ದ್ರೌಪದಿ ಮುರ್ಮು

Source: so news | By MV Bhatkal | Published on 27th September 2022, 12:24 AM | State News | Don't Miss |

ಮೈಸೂರು:ಕನ್ನಡ ನಾಡಿಗೆ ಬಂದು, ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿ ಕನ್ನಡದಲ್ಲಿ ಮಾತು ಆರಂಭಿಸಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷವಾಗಿತ್ತು. 

ಇಂದು ವಿಶ್ವವಿಖ್ಯಾತ ಮೈಸೂರು ದಸರಾ 2022ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಯಲ್ಲಿ ಭಾಗಿಯಾದ ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲಿ ಮಾತನಾಡುವ ಮೂಲಕ ರಾಜ್ಯದ ಜನರ ಮನಸ್ಸು ಗೆದ್ದಿದ್ದಾರೆ. ದೇವಿ ಚಾಮುಂಡೇಶ್ವರಿಗೆ ನನ್ನ ಮನಃಪೂರ್ವಕ ನಮಸ್ಕಾರಗಳು, ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ರಾಷ್ಟ್ರಪತಿ ಕನ್ನಡದಲ್ಲಿ ಎರಡು ವಾಕ್ಯ ಹೇಳಿದ ನಂತರ ಸಂಸ್ಕೃತದ ಚಾಮುಂಡೇಶ್ವರಿ ಶ್ಲೋಕ ಪಠಿಸಿದರು. ನೆರೆದಿದ್ದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.

ಇದು ಆದಿಶಕ್ತಿಯ ಸ್ಥಾನ
ಹಿಂದೆ ಗಣೇಶನ ಹಬ್ಬದ ಸಂದರ್ಭದಲ್ಲಿ ನಾನು ಕರ್ನಾಟಕಕ್ಕೆ ಬಂದಿದ್ದೆ. ಈಗ ದಸರಾ ಉದ್ಘಾಟನೆಯ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದುಕೊಳ್ಳುತ್ತೇನೆ. ಇದು ಆದಿಶಕ್ತಿಯ ಸ್ಥಾನ. ಅಧ್ಯಾತ್ಮಿಕವಾಗಿ ಉನ್ನತ ಸ್ಥಾನ ಪಡೆದಿರುವ ದೇವಿಯ ಸ್ಥಳ ಇದು. ಹೀಗಾಗಿಯೇ ದೂರದೂರದಿಂದಲೂ ಜನರು ದೇವಿಯ ದರ್ಶನಕ್ಕಾಗಿ ಬರುತ್ತಾರೆ ಎಂದು ರಾಷ್ಟ್ರಪತಿ ಹೇಳಿದರು.
ಕರ್ನಾಟಕದ ಅಧ್ಯಾತ್ಮಿಕ ಪರಂಪರೆ
ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವ ಹೆಚ್ಚಿಸಿದೆ. ಕರ್ನಾಟಕದಲ್ಲಿ ಜೈನ ಮತ್ತು ಬೌದ್ಧ ಪರಂಪರೆಗಳು ಬೆಸೆದುಕೊಂಡಿವೆ. ಆದಿಶಂಕರಾಚಾರ್ಯರು ಪೀಠ ಸ್ಥಾಪಿಸಿ ನಾಡಿನ ಘನತೆ ಹೆಚ್ಚಿಸಿದ್ದಾರೆ. ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯ ಸಾರಿ ಹೇಳಿದರು. ಅನುಭವ ಮಂಟಪದ ಮೂಲಕ ಅಧ್ಯಾತ್ಮಿಕ ಮತ್ತು ಸಾಮಾಜಿಕ ಚರ್ಚೆಗಳು ನಡೆಯುತ್ತಿದ್ದವು ಎಂದು ರಾಷ್ಟ್ರಪತಿ ಹೇಳಿದರು. 

ಮಹಿಳೆಯರಿಗೆ ಬಲ ತುಂಬೋಣ: ದ್ರೌಪದಿ ಮುರ್ಮು

ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಮಹಿಶಾಸುರ ಸೇರಿದಂತೆ ಹಲವು ರಾಕ್ಷಸರನ್ನು ದೇವಿ ಸಂಹಾರ ಮಾಡಿ ಜನರನ್ನು ರಕ್ಷಿಸಿದ್ದಾಳೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಕರ್ನಾಟಕದಲ್ಲಿ ಕಿತ್ತೂರು ಚೆನ್ನಮ್ಮಾ, ಓಬವ್ವರಂಥ ಮಹಾನ್ ಹೋರಾಟಗಾರ್ತಿಯರು ಇದ್ದ ನಾಡು. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪರಂಪರೆಯೊಂದಿಗೆ ಜೋಡಣೆಯಾಗಲು ನನಗೆ ಅವಕಾಶಕೊಟ್ಟರು. ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅತಿವೃಷ್ಟಿಯಿಂದ ರಾಜ್ಯದಲ್ಲಿ ಅನಾಹುತಗಳು ಸಂಭವಿಸಿದವು. ರಾಜ್ಯ ಸರ್ಕಾರವು ಅದನ್ನು ನಿರ್ವಹಿಸಲು ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಮೃದ್ಧಿ ನೆಲೆಸಲಿ.

ಕರ್ನಾಟಕದಲ್ಲಿ ದೇಶದ ಸಾಫ್ಟ್​ವೇರ್ ಮತ್ತು ಹಾರ್ಡ್​ವೇರ್​ ಉದ್ಯಮಗಳು ನೆಲೆ ನಿಂತಿವೆ. ಬೆಂಗಳೂರು ದೇಶದ ಸ್ಟಾರ್ಟ್​ಅಪ್​ ಹಬ್ ಎನಿಸಿಕೊಂಡಿದೆ. ಆವಿಷ್ಕಾರಗಳು ಹಾಗೂ ನವೋದ್ಯಮಗಳಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದೆ. ಕೇಂದ್ರ ಸರ್ಕಾರದ ಹಲವು ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಇದು ಇನ್ನಷ್ಟು ಮುನ್ನಡೆ ಸಾಧಿಸಬೇಕು ಎಂದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...