ಜಿಲ್ಲೆಯ ಎಲ್ಲಾ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ ಆಡಳಿತ- ಅಪರ ಜಿಲ್ಲಾಧಿಕಾರಿ

Source: so news | Published on 16th October 2019, 12:08 AM | Coastal News | Don't Miss |

 

ಉಡುಪಿ: ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಸುದಾಶಿವ ಪ್ರಭು ಹೇಳಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಇ-ಆಡಳಿತ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಇ-ಆಡಳಿತ ಜಾರಿಗೊಳಿಸುವ ಮೂಲಕ ಪೇಪರ್ ಲೆಸ್ ಕಚೇರಿ ನಿರ್ಮಾಣದ ಜೊತೆಗೆ ಸಾರ್ವಜನಿಕರ ತ್ವರಿತ ಗತಿಯಲ್ಲಿ ಸೇವೆಗಳನ್ನು ಒದಗಿಸುವ ಜೊತೆಗೆ ಆಡಳಿತದಲ್ಲಿ ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.ಇ-ಆಡಳಿತ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಕುರಿತಂತೆ ಹರ್ಷರಾಜ್ ತರಬೇತಿ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ಕಂದಾಯ ಇಲಾಖೆ ವ್ಯಾಪ್ತಿಯ ಸಿಬ್ಬಂದಿ ತರಬೇತಿಯಲ್ಲಿ ಹಾಜರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...