ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣ ಅತ್ಯಮೂಲ್ಯ: ನಿಂಗೇಗೌಡ

Source: so news | Published on 12th November 2019, 12:24 AM | State News | Don't Miss |

 

ಹಾಸನ: ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣ ಅತೀ ಅಮೂಲ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ರಾಮಕೃಷ್ಣ ವಿದ್ಯಾಲಯದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವಿದ್ದಲ್ಲಿ ಏನನ್ನಾದರೂ ಸಾಧಿಸಬಹುದಾಗಿದ್ದು, ಜ್ಞಾನದಿಂದ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಪ್ರಗತಿ ಸಾಧಿಸಲು ಶಿಕ್ಷಣದ ಪಾತ್ರ ಅಪಾರ ಎಂದು ನಿಂಗೇಗೌಡ ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಸ್ ಪ್ರಕಾಶ್ ಅವರು ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಗಳಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸು ಮೂಲಕ ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸುವ ಜೊತೆಗೆ ಸ್ಪರ್ದೆಗಳಲ್ಲಿ ಭಾಗವಹಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಲರಾಮ ಅವರು ಮಾತನಾಡಿ ಸ್ಪರ್ದೆಗಳಲ್ಲಿ ಭಾಗವಹಿಸುವವರು ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ ಸ್ಪರ್ದೆಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿ.ಜಿ ದೇವೇಗೌಡ, ಕಾರ್ಯದರ್ಶಿ ರವೀಂದ್ರ, ರಾಮಕೃಷ್ಣ ವಿದ್ಯಾಲಯದ ಆಡಳಿತಾಧಿಕಾರಿಗಳಾದ ಗೋಪಾಲಕೃಷ್ಣ, ತೀರ್ಪುಗಾರರಾದ ಶಶಿಕಲಾ, ಜಿ.ಎನ್ ಮಂಜುಳಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next