ಭಟ್ಕಳ ಮುಟ್ಟಳ್ಳಿ ದೇವಸ್ಥಾನ ದೋಚಿ ಪರಾರಿಯಾಗಲು ಯತ್ನಿಸಿದ ಕಳ್ಳರು ಪೊಲೀಸ್‌ ವಶಕ್ಕೆ

Source: S O News | By MV Bhatkal | Published on 7th February 2023, 12:54 AM | Coastal News | Don't Miss |

ಭಟ್ಕಳ: ತಾಲ್ಲೂಕಿನ ಮುಟ್ಟಳಿ ಗ್ರಾಮ ಪಂಚಾಯತ ವ್ಯಾಪ್ತಿ ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲ ಬಿಗ್ ಮುರಿದು ದೇವಸ್ಥಾನ ದಲ್ಲಿ ಇದ್ದ ವಸ್ತುಗಳನ್ನು ಕಳ್ಳತನ ಮಾಡಿ ಸಾಗಿಸುವಾಗ ಇಬ್ಬರು ಕಳ್ಳರು ಸ್ಥಳೀಯ ಜನರ ಕೈಯಲ್ಲಿ ತಗಲಾಕೊಂಡಿರೋ ಘಟನೆ ನಡೆದಿದೆ

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಟಿಪ್ಪು ನಗರ ಮೂಲದ, ಹಾಲಿ ಬೆಳಲಖಂಡ ಯಲ್ಲಿ ವಾಸವಾಗಿರುವ ಇರ್ಫಾನ್ ಅನ್ವರ್ ಸಾಬ್ (38) ಹಾಗೂ ಆರೀಫ್ ಅನ್ಸಾರ್ (24) ಎಂದು ಗುರುತಿಸಲಾಗಿದೆ. ಕಳ್ಳರು ರಾತ್ರಿಸಮಯದಲ್ಲಿ ನಿರ್ಜನ ಪ್ರದೇಶದಲ್ಲಿ ಇರುವ ಮುಟ್ಟಳಿ ಮತ್ತು ತಲಾನ ಗ್ರಾಮದ  ಜನರು ಪೂಜಿಸುವ ಶಕ್ತಿ ದೇವತೆ ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗವನ್ನು ಒಡೆದು ಒಳಗೆ ಹೋಗಿ ಪ್ರವೇಶಿಸಿ ದೇವಸ್ಥಾನದ ಹುಂಡಿಗಳನ್ನು ಒಡೆದು ಅಂದಾಜು ಸುಮಾರು 5,000 ರಿಂದ 5500 ರೂ. ಹಣ ಮತ್ತು ದೇವಸ್ಥಾನದ ಗಂಟೆಗಳು, ಕಾಲುದೀಪ ಮತ್ತು ದೇವರ ಹರಿವಾಣ, ಇನ್ನಿತರ ವಸ್ತುಗಳನ್ನು ಕಳುವು ಮಾಡಿ ಚೀಲಗಳಲ್ಲ ತುಂಬಿಕೊಂಡು ಅಲ್ಲಿಂದ ಕಾಲು ಕೀಳುವ ಮುನ್ನ, ದೇವಸ್ಥಾನ ಪಕ್ಕದ ರಸ್ತೆಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಮುಟ್ಟಳ್ಳಿ ಭಾಗದ ಕಾರ್ಮಿಕರೊಬ್ಬರ ಬೈಕ್‌ ಬೆಳಕಿನಲ್ಲಿ ಕಣ್ಣಿಗೆ ಬಿದ್ದಿದ್ದಾರೆ.

ಕಳ್ಳರು ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸುವ ಸಾಧ್ಯತೆಯನ್ನು ಅರಿತ ಅವರು ಕೂಗಾಡಿಕೊಂಡು ಅಕ್ಕಪಕ್ಕದ ನಿವಾಸಿಗಳಿಗೆ ಮಾಹಿತಿ ನೀಡಿದ್ದಾರೆ. ಇದಾದ ಕೆಲವೇ ಕ್ಷಣದಲ್ಲಿ ಸುತ್ತಮುತ್ತಲಿನ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾರ್ವನಿಕರ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಟಿವಿಎಸ್ ಅಪಾಚಿ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುವ ಪ್ರಯತ್ನದಲ್ಲಿರುವಾಗಲೇ ಕೆಳಕ್ಕೆ ಬಿದ್ದಿದ್ದು, ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಶ್ರೀಧರ ನಾಯ್ಕ ತನಿಖೆ ಕೈಗೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...