​​​​​​​ಶ್ರೀನಿವಾಸಪುರದಲ್ಲಿ  ಚುನಾವಣೆ ಹಾಗೂ ಕಾನೂನು ತಿದ್ದುಪಡಿ ತರಬೇತಿ ಕಾರ್ಯಾಗಾರ

Source: sonews | By Staff Correspondent | Published on 26th December 2018, 10:59 PM | State News |

ಶ್ರೀನಿವಾಸಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾನೂನು ತಿದ್ದುಪಡಿ ಅರಿತು ಸಹಕಾರ ಸಂಘಗಳ ಚುನಾವಣೆ ನಡೆಸಬೇಕು ಎಂದು ಕೋಮುಲ್ನಿರ್ದೇಶಕ ಬೈರಾರೆಡ್ಡಿ ಹೇಳಿದರು.

ಪಟ್ಟಣದ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪ ಕಚೇರಿಯ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಿದ್ದ ಚುನಾವಣೆ ಹಾಗೂ ಕಾನೂನು ತಿದ್ದುಪಡಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಸಹಕಾರ ಸಂಘಗಳ ಚುನಾವಣೆ ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಯಲ್ಲಿ ರಾಜಕೀಯ ಬೆರೆಸಬಾರದು. ವಿದ್ಯಾವಂತರು ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು. ಶಾಂತಿಯುತವಾಗಿ ಚುನಾವಣೆ ನಡೆಯಲು ಸಹಕರಿಸಬೇಕು. ಸಹಕಾರ ಕ್ಷೇತ್ರದ ಮಹತ್ವ ದೊಡ್ಡದು. ಅದು ಹಾಗೆಯೇ ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ಘನತೆ ಗೌರವಕ್ಕೆ ಧಕ್ಕೆ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಬಂಗಾರಪೇಟೆ ಟಿಎಪಿಸಿಎಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಜಗದೀಶ್ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ಹಾಗೂ ಇತ್ತೀಚಿನ ಕಾನೂನು ತಿದ್ದುಪಡಿಗಳ ಬಗ್ಗೆ ಮಾತನಾಡಿದರು.

ಕ್ಯಾಂಪ್ಕಚೇರಿ ಉಪ ವ್ಯವಸ್ಥಾಪಕ ಬಿ.ಶಿವರಾಜ್ರಾಸುಗಳ ನಿರ್ವಹಣೆ ಹಾಗೂ ಶುದ್ಧ ಹಾಲು ಉತ್ಪಾದನೆ ಕುರಿತು ಉಪನ್ಯಾಸ ನೀಡಿದರು.

ಸಹಕಾರ ಕ್ಷೇತ್ರದ ಮುಖಂಡರಾದ ಕೆ.ಎಂ.ನಾಗರಾಜ್‌, ಬಿ.ವಿ.ವೆಂಕಟರೆಡ್ಡಿ, ಡಿ.ವಿ.ಅಶೋಕ್‌, ಎಸ್‌.ವೈ.ಮುನಿಸ್ವಾಮಿ, ಎನ್‌.ವೆಂಕಟೇಶ್‌, ಸಿ.ವಿ.ನಾಗರಾಜಗೌಡ, ಬಿ.ಆರ್‌.ನಾಗೇಶಗೌಡ, ಬಿ.ಆರ್‌.ಶಿವಶಂಕರ್‌, ನಾರಾಯಣಪ್ಪ, ನರಸಿಂಹಯ್ಯ ಇದ್ದರು.

 

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...