ಭಟ್ಕಳದ​​​​​​​ಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ; ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಪಾತ್ರವೇ ನಿರ್ಣಾಯಕ : ನ್ಯಾಯಾಧೀಶ ನಾಗೇಂದ್ರ ಅಬಿಮತ

Source: S O News service | By I.G. Bhatkali | Published on 25th January 2021, 11:10 AM | Coastal News |

ಭಟ್ಕಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಪಾತ್ರವೇ ನಿರ್ಣಾಯಕ. ಒಂದು ಕಾಲಕ್ಕೆ ರಾಜನೇ ಪ್ರತ್ಯಕ್ಷ ದೈವ ಎಂಬ ರಾಜಪ್ರಭುತ್ವ ವ್ಯವಸ್ಥೆಯನ್ನು  ದಾಟಿ ಇಂದು ಪ್ರಜೆಗಳೆ ಪ್ರಭುಗಳಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಇಲ್ಲಿ ಎಲ್ಲರಿಗೂ ನೀಡುವ ಮತದಾನದ ಹಕ್ಕನ್ನು ಪಡೆದು ಸಮರ್ಪಕವಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಸಾಧ್ಯ ಎಂದು ಭಟ್ಕಳದ ಪ್ರಧಾನ ಸಿವಿಲ್ ನ್ಯಾಧೀಶ ನಾಗೇಂದ್ರ ನುಡಿದರು. ಅವರು ಇಲ್ಲಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕಾ ಆಡಳಿತದಿಂದ ನಡೆದ 11ನೇ ರಾಷ್ಟ್ರೀಯ ಮತದಾರ ದಿನಾಚರಣೆಯ ಕಾರ್ಯಕರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.   

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಭರತ್ ಎಸ್ ಮಾತನಾಡಿ ನಮ್ಮ ಮತದಾನ ಪ್ರಕ್ರಿಯೆಯ ಕುರಿತು ಜಾಗೃತಿ ಮೂಡಿಸಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸುವುದೇ ಇಂದಿನ ಕಾರ್ಯಕ್ರಮದ ಉದ್ದೇಶ ಎಂದರು. 

ಕಾರ್ಯಕ್ರಮದಲ್ಲಿ ಉಪನ್ಯಾಸ ನಿಡಿದ ಪ್ರಾರ್ಥನಾ ಪ್ರತಿಷ್ಠಾನದ ಆಧ್ಯಕ್ಷ ಗಂಗಾಧರ ನಾಯ್ಕ ರಾಷ್ಟ್ರೀಯ ಮತದಾರರ ದಿನಾಚರಣೆಯ ಹಿನ್ನೆಲೆ ಮತ್ತು ಉದ್ದೇಶಗಳ ಕುರಿತು ಮಾತನಾಡಿ ಪ್ರಪಂಚದ ಅತ್ಯಂತ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟವಾಗಿರುವ ನಮ್ಮ ದೇಶದಲ್ಲಿ ಮತದಾನದ ಹಕ್ಕನ್ನು ಪಡೆಯುವುದೇ ಗೌರವ. ಆ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಿ ನಮ್ಮ ವ್ಯವಸ್ಥೆಯನ್ನು ರೂಪಿಸುವ ಆಳುವವರನ್ನು ಆಯ್ಕೆ ಮಾಡುವ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಿದೆ. ರಾಷ್ಟ್ರೀಯ ಮತದಾರರ ದಿನಾಚರಣೆಯು ಪ್ರಜಾ ಪ್ರಭುತ್ವ ವ್ಯವಸ್ಥೆ, ಮತದಾರರ ಜವಾಬ್ದಾರಿ, ಕರ್ತವ್ಯಗಳ ಅರಿವು ಮೂಡಿಸಿ ರಾಷ್ಟ್ರದೆಡೆಗಿನ ನಮ್ಮ ಕರ್ತವ್ಯವನ್ನು ನೆನಪಿಸುವ ದಿನವಾಗಿದೆ ಎಂದು ನುಡಿದರು. 

ಕಾರ್ಯಕ್ರಮದಲ್ಲಿ ಉಪಸ್ಥೀತರಿದ್ದ ಕ್ಷೇತ್ರಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದ ಯುವಕ ಯುವತಿಯರಿಗೆ ಮತದಾನದ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಉಪಸ್ಥಿತರಿದ್ದ ಸರ್ವರೂ  ಮತದಾರರ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ತಹಶೀಲ್ದಾರ ರವಿಚಂದ್ರ ಎಲ್ಲರನ್ನು ಸ್ವಾಗತಿಸಿದರು. ಸುರೇಶ ಮುರ್ಡೇಶ್ವರ ನಿರ್ವಹಿಸಿದರು. ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...