ಚುನಾವಣಾ ಅಕ್ರಮ ತಡೆಗೆ ಪರಿಷ್ಕರಣೆ ಅಗತ್ಯ -ಅಪರ ಜಿಲ್ಲಾಧಿಕಾರಿ

Source: so news | Published on 16th October 2019, 12:15 AM | State News | Don't Miss |


ಶಿವಮೊಗ್ಗ: ಮತದಾನದಲ್ಲಿ ನಡೆಸಬಹುದಾದ ಅಕ್ರಮವನ್ನು ತಡೆಯುವ ಹಾಗೂ ಮತದಾರರ ಪಟ್ಟಿಯನ್ನು ನವೀಕರಿಸುವ ಸಲುವಾಗಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಆಯೋಗದೊಂದಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಅನುರಾಧ .ಜಿ ಮನವಿ ಮಾಡಿದರು.
ನಗರದ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಸಭಾಂಗಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವವನ್ನು ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು. ಈ ನಿಟ್ಟಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅಗತ್ಯವಾಗಿದೆ ಎಂದರು.
ಮೃತ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗೆ ಹಾಕಬೇಕು ಅದು ಹಾಗೆಯೆ ಉಳಿದುಕೊಂಡರೆ ಆತನ ಹೆಸರಿನಲ್ಲಿ ಬೇರೆಯವರು ಮತ ಚಲಾಯಿಸಿ ದುರ್ಬಳಕೆ ಮಾಡಿಕೊಂಡಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಒದಗುತ್ತದೆ. ಇದಲ್ಲದೆ ಮತದಾರರಿಗೆ ಹಳೆಯ ಪಟ್ಟಿಯಲ್ಲಿ ತೊಡಕಾಗಿ ಬೇರೆಯ ಬೂತ್‍ಗಳಿಗೆ ಸೇರ್ಪಡೆಯಾಗಿ ತೊಂದರೆಯಾಗಿರಬಹುದು. ಇದೆಲ್ಲ ತೊಡಕುಗಳನ್ನು ಸರಿಪಡಿಸಿಕೊಳ್ಳಲು ಈ ಪರಿಷ್ಕರಣಾ ಅವಧಿಯನ್ನು ಬಳಸಿಕೊಳ್ಳುವಂತೆ ಅವರು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಇರುವಂತಹ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿ (ಬಿಎಲ್‍ಓ) ಗಳಿಂದ ಮನೆಮನೆ ಭೇಟಿ ಕಾರ್ಯವನ್ನು ನ. 18ರ ವರೆಗೆ ನಡೆಸಲಾಗುವುದು. ಈ ವೇಳೆ ಆಧಾರ್ ಕಾರ್ಡ್, ಚಾಲನಾ ಪರವಾನಿಗೆ, ಪಡಿತರ ಚೀಟಿ, ಸರ್ಕಾರಿ ನೌಕರರ ಕಾರ್ಡ್ ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರು ಒಂದು ದಾಖಲೆಯನ್ನು ನೀಡುವ ಮೂಲಕ ಪರಿಷ್ಕರಿಸಿಕೊಳ್ಳುವಂತೆ ಅವರು ತಿಳಿಸಿದರು.
ಆಯಾ ತಾಲ್ಲೂಕುಗಳ ತಹಶಿಲ್ದಾರ್ ಕಛೇರಿ, ನಗರ ಸಭೆ ಹಾಗೂ ಪಾಲಿಕೆಗಳ ಕಛೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಲು ಕೇಂದ್ರವನ್ನು ತೆರೆಯಲಾಗಿದೆ. ಗ್ರಾಮ ಪಂಚಾಯತ್ ಕಛೇರಿಯಲ್ಲಿಯು ಸಹ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕೇಂದ್ರಗಳು ಕಾರ್ಯನಿರತವಾಗಿವೆ. ಇದರೊಂದಿಗೆ ಮತದಾರರು ಎನ್‍ವಿಎಸ್‍ಪಿ ಪೋರ್ಟಲ್ ಮೊಬೈಲ್ ಆಪ್ ಮೂಲಕ ಸ್ವತಃ ಪರಿಷ್ಕರಿಸಿಕೊಳ್ಳಲು ಅವಕಾಶವಿದೆ. ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮತದಾರರ ಪಟ್ಟಿಯನ್ನು ಪರಿಷ್ಕರಿಸಿಕೊಳುವಂತೆ ಅವರು ಸಲಹೆ ನೀಡಿದರು.
ಮತದಾರರ ಚೀಟಿ ಪರಿಷ್ಕರಣೆ ವೇಳೆ ಯಾವುದೇ ಗೊಂದಲಗಳಿದ್ದರು ಸಹ ಅಧಿಕಾರಿಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ವಾಗ್ದೇವಿ ವಹಿಸಿದ್ದರು. ಚುನಾವಣಾ ವಿಭಾಗದ ನೂಡಲ್ ಅಧಿಕಾರಿ ಸಮನ್ವಯ ಕಾಶಿ, ರಿಯಾಜ್ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...