ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ. ಬೆಳಿಗ್ಗೆಯಿಂದ ಶಾಂತಿಯುತವಾಗಿ ಮತದಾನ ಆರಂಭ.

Source: SO News | By Laxmi Tanaya | Published on 28th October 2020, 9:54 AM | State News | Don't Miss |

ಕಾರವಾರ : ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಮತದಾನ ಬೆಳಿಗ್ಗೆ ಎಂಟು ಗಂಟೆಯಿಂದ ಆರಂಭವಾಗಿದೆ

ಜಿಲ್ಲೆಯಾದ್ಯಂತ ಒಟ್ಟೂ 26 ಮತಗಟ್ಟೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.  7113 ಪುರುಷರು, 6034 ಮಹಿಳೆಯರು,  ಸೇರಿ ಒಟ್ಟೂ 13148 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ಕೂಡ ಮತದಾರರು ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.  

ಮತಗಟ್ಟೆಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚುನಾವಣಾ ಕಾರ್ಯಕ್ಕೆ ಒಟ್ಟೂ 148 ಮಂದಿ ಸಿಬ್ಬಂದಿ ನಿಯೋಜಿಸಲಾಗಿದೆ.

ಮತಗಟ್ಟೆಗ ಆಗಮಿಸುವ ಮತದಾರರಿಗೆ ಆರೋಗ್ಯ ಪರೀಕ್ಷೆ ನಡೆಸಿದ ಬಳಿಕ ಮತಗಟ್ಟೆಗೆ ತೆರಳಲು‌ ಅವಕಾಶ ನೀಡಲಾಗುತ್ತಿದೆ. ಕೋವಿಡ್ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತದಾರರು ಮತದಾನ ಮಾಡುತ್ತಿದ್ದಾರೆ. 

ಸಂಜೆ ಐದು ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಅವರ ನಡುವೆ ತೀವೃ ಪೈಪೋಟಿ ನಡೆದಿದೆ.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...