ಸೆ. 27ಕ್ಕೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Source: S O News service | By I.G. Bhatkali | Published on 19th September 2021, 9:04 PM | State News |

ಬೆಂಗಳೂರು: ಕನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ತೆರವಾಗಿರುವ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಕೈಗೊಳ್ಳಲು ಸೆಪ್ಟೆಂಬರ್ 27 ರಂದು ದಿನಾಂಕವನ್ನು ನಿಗಧಿಪಡಿಸಲಾಗಿದೆ.

ದಿನಾಂಕ: 27-09-2021 ರಂದು ಮಧ್ಯಾಹ್ನ 12.00 ಘಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಛೇರಿ, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸಭೆಯನ್ನು ಏರ್ಪಡಿಸಲಾಗಿದೆ.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇವರನ್ನು ನಾಮಪತ್ರಗಳನ್ನು ಸ್ವೀಕರಿಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳು ಅಧಿಕೃತಗೊಳಿಸಿರುತ್ತಾರೆ.

ನಾಮಪತ್ರಗಳನ್ನು ಸ್ವೀಕರಿಸಲು ಸೆಪ್ಟೆಂಬರ್ 27, ಮುಂಜಾನೆ 10.00 ಗಂಟೆಯಿಂದ 11.00 ಗಂಟೆಯವರೆಗೆ ನಿಗಧಿಗೊಳಿಸಿದ್ದು, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಛೇರಿ, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಇಲ್ಲಿ ನಾಮಪತ್ರಗಳನ್ನು ಸಲ್ಲಿಬಹುದಾಗಿದೆ.
ಚುನಾವಣಾ ಸಭೆಯಲ್ಲಿ ಎಲ್ಲಾ ಸದಸ್ಯರ ಹಾಜರಾತಿ ಕಡ್ಡಾಯವಾಗಿದ್ದು, ನಾಮಪತ್ರಗಳ ಪರಿಶೀಲನೆ, ನಾಮಪತ್ರಗಳನ್ನು ವಾಪಸ್ ಪಡೆಯುವುದು, ಚುನಾವಣೆ (ಅಗತ್ಯವಿದ್ದಲ್ಲಿ), ಮತಗಳ ಎಣಿಕೆ (ಅಗತ್ಯವಿದ್ದಲ್ಲಿ),  ನಂತರ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ನಡೆಯಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...