ಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ದೊಡ್ಡ ಹಬ್ಬ: ಅಕ್ರಂ ಪಾಷ

Source: so news | By MV Bhatkal | Published on 17th March 2019, 12:33 AM | State News | Don't Miss |


ಹಾಸನ : ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ ಪತ್ರಿಯೊಬ್ಬ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೋಳ್ಳುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಶಾಹಿ ಗಾರ್ಮೆಂಟ್ಸ್‍ನಲ್ಲಿ ಇಂದು ಜಿಲ್ಲಾಡಳಿತ, ಸ್ಪೀಪ್ ಸಮಿತಿ ಹಾಗೂ ಕಾರ್ಮಿಕ ಇಲಾಖಾ ವತಿಯಿಂದ ಏರ್ಪಡಿಸಿದ್ದ ಮತದಾರರ ಜಾಗೃತಿ ಚಟುವಟಿಕೆ ಹಾಗೂ ವಿದ್ಯುನ್ಮಾ ಮತಯಂತ್ರಗಳ ಬಳಕೆ ಪ್ರಾತೆಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಪ್ರತಿಯೊಬ್ಬರ ಸಂಪೂರ್ಣ ಸಹಭಾಗಿತ್ವ ಸಂಪೂರ್ಣ ಅಗತ್ಯ ಎಂಬುದು ಚುನಾವಣಾ ಆಯೋಗದ ಆಶಯ. ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರು ಏ. 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇರುವ 18 ವರ್ಷ ತುಂಬಿರುವರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಎಲ್ಲರೂ ನೈತಿಕ ಮತದಾನದ ಮಹತ್ವ ಅರಿಯಬೇಕು ಹಾಗೂ ಇತರರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಸ್ಪೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.ಎನ್. ವಿಜಯಪ್ರಕಾಶ್ ಅವರು ಕಾರ್ಮಿಕರಿಗೆ ಮತದಾರರ ಪ್ರತಿಜ್ಞಾನವಿಧಿ ಬೋದಿಸಿದರು. ಎಲ್ಲರಿಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ ಅ ಶಿಂದಿಹಟ್ಟಿ, ಜಿಲ್ಲಾ ಸ್ಪೀಪ್ ಸಮಿತಿ ಸದಸ್ಯಕಾರ್ಯದರ್ಶಿ ವಿನೋದ್ ಚಂದ್ರ, ತೋಟಗಾರಿಕ ಇಲಾಖಾ ಹಿರಿಯ ಸಹಾಯ ನಿರ್ದೇಶಕರಾದ ರವಿಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಬಾಲಕೃಷ್ಣ, ಮಾಸ್ಟರ್ ಟ್ರೈನರ್ ಉಬೇದುಲ್ಲಾ, ಶಾಹೀ ಏಕ್ಸ್‍ಪೋಟ್ರ್ಸ್‍ನ ಹಿರಿಯ ಸಾಮಾನ್ಯ ವ್ಯವಸ್ಥಾಪಕರಾದ ಸುಬ್ರಹ್ಮಣ್ಯ, ಡಿ.ಜಿ.ಎಂ. ಪ್ರಸನ್ನ ಪವಾರ್, ಎ.ಜಿ.ಎಂ ಅಪರೇಟರ್ ನೆಲ್ಸನ್ ಮತ್ತಿತರರು ಹಾಜರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...