ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ

Source: SO News | By Laxmi Tanaya | Published on 3rd December 2022, 10:14 PM | State News | Don't Miss |

ಬೆಂಗಳೂರು ಗ್ರಾಮಾಂತರ : ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ  ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕಾರ್ಯವು ನಡೆಯುತ್ತಿದೆ, 2023ರ ಜನವರಿ 1 ರ ಅರ್ಹತಾ ದಿನಾಂಕಕ್ಕೆ ಅನ್ವಯಿಸಿ  ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದೆ.  ಡಿಸೆಂಬರ್ 03 ಹಾಗೂ  ಡಿಸೆಂಬರ್ 04 ರಂದು ಜಿಲ್ಲೆಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಮನೆ ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಜಿಲ್ಲೆಯ ಮತದಾರರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ಕಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುವ ಕಾರ್ಯ ಸಾಗಿದೆ. 
 ಕಳೆದ ನವೆಂಬರ್ 09 ರಂದು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿ, ಮತದಾರರ ನೋಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿ ಹಾಗೂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಸಾರ್ವಜನಿಕರ ತಿಳುವಳಿಕೆಗಾಗಿ ಪ್ರಕಟಿಸಲಾಗಿದೆ .

 ವಿಧಾನಸಭಾ ಕ್ಷೇತಗಳ ಕರಡು ಮತದಾರರ ಪಟ್ಟಿಯನ್ನು ಕರ್ನಾಟಕ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಜಾಲತಾಣ www.ceokarnataka.gov.in ದಲ್ಲಿಯೂ ಪಿಡಿಎಫ್ ಆವೃತ್ತಿಯನ್ನು ಹಾಕಲಾಗಿರುತ್ತದೆ. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಂಡು , ಸರಿಯಾದ ಹೆಸರನ್ನು ನಮೂದುಗಳೊಂದಿಗೆ ನೊಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಆಯಾ ವಿಧಾನ ಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳಿಗೆ ಪ್ರತಿ ದಿನ ಸ್ವೀಕೃತವಾಗುವ ನಮೂನೆ 6, 7 ಹಾಗೂ 8 ರಲ್ಲಿನ ಮಾಹಿತಿಗಳನ್ನು  ಅಧಿಕೃತ ಜಾಲತಾಣ www.ceokarnataka.gov.in ದಲ್ಲಿ ದಾಖಲಿಸಿಲಾಗುತ್ತಿದೆ. ಅದರ Oo(Link) http://erms.karnataka.gov.in/claimsobjection/Claims Objection.aspx ಆಗಿರುತ್ತದೆ.

 ಅರ್ಜಿ ಸಲ್ಲಿಸುವ ವಿಧಾನ:
ಪ್ರತಿ ವಿಧಾನಸಭಾಕ್ಷೇತ್ರಕ್ಕೆ ನೇಮಕವಾಗಿರುವ ಅಧಿಸೂಚಿತ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ನಿಗದಿತ ನಮೂನೆಗಳಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಗಳನ್ನುಸಲ್ಲಿಸಬೇಕಾಗುವುದು.
ನಮೂನೆ-6:ಹೆಸರು ಸೇರ್ಪಡೆಗೆ.
 ನಮೂನೆ -6 ಎ:ಸಾಗರೋತ್ತರ ಭಾರತೀಯ ಮತದಾರರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ. ನಮೂನೆ 6 ಬಿ:ಮತದಾರರ ಪಟ್ಟಿಯಲ್ಲಿರುವ ಮತದಾರರು ಸ್ವಯಂಪ್ರೇರಿತರಾಗಿ ಆಧಾರ್ ಅಥವಾ  ನಮೂದಿಸಿದ ಇತರೆ 11 ದಾಖಲೆಗಳಲ್ಲಿ ಒಂದನ್ನು ಜೋಡಣೆ ಮಾಡಿ ದೃಢೀಕರಿಸಲು.
ನಮೂನೆ 07-ಹೆಸರು ಸೇರ್ಪಡೆಯ ವಿರುದ್ಧ ಆಕ್ಷೇಪಣೆ/ ಹೆಸರು ತೆಗೆದುಹಾಕಲು.
 ನಮೂನೆ -8: ವಿಧಾನಸಭಾ ಕ್ಷೇತ್ರದ ಒಳಗೆ ಹೊರಗೆ ನಿವಾಸ ಬದಲಾವಣೆ, ನಮೂದು ಗಳಲ್ಲಿ ತಿದ್ದುಪಡಿಗಳು, ಮೊಬೈಲ್ ಸಂಖ್ಯೆ ನಮೂದಿಸುವುದು, ಅಸ್ಪಷ್ಟ ಭಾವಚಿತ್ರಗಳನ್ನು ಬದಲಾಯಿಸುವುದು, ಎಪಿಕ್ ಬದಲಾವಣೆ ಮತ್ತು ಮತದಾರರ ಪಟ್ಟಿಯಲ್ಲಿ ವಿಕಲಚೇತನ ಮತದಾರರನ್ನು ಗುರುತನ್ನು ನಮೂದಿಸಲು ಉಪಯೋಗಿಸಲಾಗುತ್ತಿದೆ.
ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳಲ್ಲಿ  ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೀಕ್ಷಕರು,ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಎಲ್ಲಾ ತಹಸೀಲ್ದಾರರು , ಮತಗಟ್ಟೆ ಮಟ್ಟದ ಅಧಿಕಾರಿಗಳು ಈ ಚಟುವಟಿಕೆಯಲ್ಲಿ  ತೊಡಗಿಸಿಕೊಂಡಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...