ಕೊಪ್ಪಳದಲ್ಲಿ ವಿದ್ಯುತ್ ತಂತಿ ಸ್ಪರ್ಶ; 5 ವಿದ್ಯಾರ್ಥಿಗಳ ಸಾವು

Source: S.O. News Service | By V. D. Bhatkal | Published on 18th August 2019, 11:02 AM | State News |

ಕೊಪ್ಪಳ: ವಿದ್ಯುತ್‌ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳದ ನಗರದ ಬನ್ನಿಕಟ್ಟಿ ಪ್ರದೇಶದಲ್ಲಿರುವ ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ವಸತಿ ನಿಲಯದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

10ನೇ ತರಗತಿ ವಿದ್ಯಾರ್ಥಿಗಳಾದ ಮೆಟಗಲ್​​ ನಿವಾಸಿ ಮಲ್ಲಿಕಾರ್ಜುನ ಮತ್ತು ಲಿಂಗದಹಳ್ಳಿ ನಿವಾಸಿ ಬಸವರಾಜ, 9ನೇ ತರಗತಿ ವಿದ್ಯಾರ್ಥಿಗಳಾದ ಹಲಗೇರಿಯ ದೇವರಾಜ, ಹೈದರ್‌ ​ನಗರದ ಕುಮಾರ್​, 8ನೇ ತರಗತಿಯ ಲಾಚನಕೇರಿ ನಿವಾಸಿ ಗಣೇಶ್​ ಮೃತ ವಿದ್ಯಾರ್ಥಿಗಳು.

ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ಮಾಡಲಾಗಿತ್ತು. ಧ್ವಜಾರೋಹಣ ಕಂಬವನ್ನು ಬ್ಯಾರಲ್ ನಲ್ಲಿ ಇಡಲಾಗಿತ್ತು‌. ಆ ಬ್ಯಾರಲ್ ಗೆ ವಿದ್ಯುತ್ ತಂತಿ ತಾಗಿದೆ. ಇದನ್ನು ಗಮನಿಸದೇ ವಿದ್ಯಾರ್ಥಿಗಳು ಕಂಬವನ್ನು ಕೆಳಗೆ ಇಳಿಸಲು ಮುಂದಾಗಿದ್ದಾರೆ. ಆಗ ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಕೊಪ್ಪಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕೊಪ್ಪಳ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...