ಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರೊಫೆಸರ್ ಹನಿ ಬಾಬುಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಕಾರ

Source: The New Indian Express | By MV Bhatkal | Published on 20th September 2022, 12:14 AM | National News |

ಮುಂಬೈ: ಎಲ್ಗರ್ ಪರಿಷತ್ -ಮಾವೋವಾದಿ ನಂಟು ಪ್ರಕರಣದ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಜಾಮೀನು ನಿರಾಕರಿಸಿದ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಬಾಬು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎನ್ ಎಂ ಜಾಮ್ದಾರ್ ಮತ್ತು ಎನ್ ಆರ್ ಬೋರ್ಕರ್ ಅವರ ವಿಭಾಗೀಯ ಪೀಠ ಹೇಳಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ನಾಯಕರ ಸೂಚನೆಯ ಮೇರೆಗೆ ಮಾವೋವಾದಿ ಚಟುವಟಿಕೆಗಳು ಮತ್ತು ಸಿದ್ಧಾಂತವನ್ನು ಪ್ರಚಾರ ಮಾಡುವಲ್ಲಿ ಬಾಬು ಸಹ ಸಂಚುಕೋರ ಎಂದು ಆರೋಪಿಸಿದೆ. ಈ  ಪ್ರಕರಣದಲ್ಲಿ ಜುಲೈ 2020 ರಲ್ಲಿ ಹಾನಿ ಬಾಬು ಅವರನ್ನು ಬಂಧಿಸಲಾಗಿತ್ತು.  ಪ್ರಸ್ತುತ ಅವರು ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದನಕಾರಿ ಭಾಷಣಗಳಿಗೆ ಈ ಪ್ರಕರಣವು ಸಂಬಂಧಿಸಿದ್ದು, ಮರುದಿನ ನಗರದ ಹೊರವಲಯದಲ್ಲಿರುವ ಕೋರೆಗಾಂವ್ ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...