ತುರ್ತು ಪರಿಸ್ಥಿತಿ ನಿರ್ವಹಣೆ ಪ್ರಾತ್ಯಕ್ಷಿಕೆ

Source: SO News | By Laxmi Tanaya | Published on 30th June 2022, 9:56 PM | State News | Don't Miss |

ಧಾರವಾಡ : ಅಗ್ನಿ ಅವಘಡಗಳು, ನೈಸರ್ಗಿಕ ವಿಕೋಪಗಳು, ಸಾಂಕ್ರಾಮಿಕಗಳು ಮೊದಲಾದ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಗಾಂಧಿ ನಗರದ ಜಿಲ್ಲಾ ತರಬೇತಿ ಸಂಸ್ಥೆ ಆವರಣದಲ್ಲಿ ಮೈಸೂರಿನ ಎಟಿಐ ವಿಕೋಪ ನಿರ್ವಹಣಾ ಕೇಂದ್ರ ಏರ್ಪಡಿಸಿದ್ದ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆ ಪರಿಷ್ಕರಣೆ ಕುರಿತ ಕಾರ್ಯಾಗಾರದಲ್ಲಿ ಈ ಪ್ರಾತ್ಯಕ್ಷಿಕೆ ಜರುಗಿತು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಲುಕುಟಿಗರ್ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಅಮೃತ ಅವರು ವಿವಿಧ ರೀತಿಯ ಅಗ್ನಿ ಅವಘಡಗಳ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕ್ರಮಗಳು, ಅಡಿಗೆ ಅನಿಲ, ವಾಹನಗಳ ಇಂಧನ ಸೋರಿಕೆ ಮತ್ತಿತರ ವಿಪತ್ತು ಸಂದರ್ಭದಲ್ಲಿ ಬೆಂಕಿಗೆ ಕಾರಣವಾಗುವ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಪ್ರವೃತ್ತರಾಗಬೇಕು. ಬೆಂಕಿ ನಂದಿಸಲು ನೀರು, ತಂಪುಕಾರಕ ವಸ್ತುಗಳು, ಫೋಮ್, ಬ್ಲ್ಯಾಂಕೆಟ್ ಬಳಕೆ ಪದ್ಧತಿಗಳನ್ನು ಪಾಲಿಸಬೇಕು. ಯಾವ ರೀತಿಯ ಅವಘಡ ಸಂಭವಿಸಿದೆ ಎಂಬುದನ್ನು ಆಧರಿಸಿ ಶಮನದ ವಿಧಾನ ನಿರ್ಧಾರವಾಗುತ್ತದೆ ಎಂದರು. 

ಪ್ರವಾಹ ಸಂದರ್ಭದಲ್ಲಿ ಜೀವರಕ್ಷಣೆಗೆ ಅಗತ್ಯವಿರುವ ಲೈಫ್‍ಜಾಕೆಟ್, ಬೋಟ್, ರೋಪ್ ಲ್ಯಾಡರ್, ಆಮ್ಲಜನಕ ಪೂರೈಕೆಯ ಸಾಧನಗಳೊಂದಿಗೆ ಸಿಬ್ಬಂದಿ ಸದಾಕಾಲ ಸನ್ನದ್ಧರಾಗಿರುತ್ತಾರೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ 101 ದೂರವಾಣಿ ಸಂಪರ್ಕಿಸಿ ನೆರವು ಪಡೆಯಬಹುದು ಎಂದು ವಿವರಿಸಿದರು.

ಕಾರ್ಯಾಗಾರ ಸಮಾರೋಪ: ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಗಾರ ಇಂದು ಸಂಜೆ ಸಮಾರೋಪಗೊಂಡಿತು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಮಾತನಾಡಿ, ವಿಪತ್ತು ನಿರ್ವಹಣೆ ಕಾರ್ಯವು ಆಡಳಿತ ವ್ಯವಸ್ಥೆಯ ಮುಖ್ಯ ಜವಾಬ್ದಾರಿಗಳಲ್ಲೊಂದಾಗಿದೆ. ಎಲ್ಲ ಇಲಾಖೆಗಳು ತಮ್ಮ ಪಾತ್ರ ಅರಿತು ಸಕಾಲಿಕವಾಗಿ ನಿರ್ವಹಿಸಬೇಕು. ವಿಪತ್ತು ನಿರ್ವಹಣೆಗೆ ಪ್ರಾಥಮಿಕವಾಗಿ ಸ್ಪಷ್ಟ ಯೋಜನೆ ಸಿದ್ದಪಡಿಸಿ ಇಟ್ಟುಕೊಂಡಿರಬೇಕು ಎಂದರು.

 ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಭಾರತಿ ಮುಗದುಮ್ ಅವರು ಕೈಗಾರಿಕಾ ವಿಪತ್ತು ನಿರ್ವಹಣೆ ಯೋಜನೆ ಕುರಿತು ವಿವರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಕವಿತಾ ಅಂಗಡಿ, ಎಟಿಐ ಬೋಧಕ ಡಾ.ಚಂದ್ರ ನಾಯಕ, ಜಿಲ್ಲಾಧಿಕಾರಿಗಳ ಕಚೇರಿ ವಿಪತ್ತು ನಿರ್ವಹಣೆ ಸಂಯೋಜಕ ಪ್ರಕಾಶ ವೈ. ಎಚ್ ಮತ್ತಿತರರು ಪಾಲ್ಗೊಂಡಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...