ನೌಕರರು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆ : ಕೆ.ಎಸ್.ಈ.

Source: so news | Published on 5th October 2019, 12:25 AM | State News | Don't Miss |


ಶಿವಮೊಗ್ಗ:ಸರ್ಕಾರಿ ನೌಕರರು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ನಗರದ ರಾಜ್ಯ ಸರ್ಕಾರಿ ನೌಕರರ ಸಭಾಂಗಣದಲ್ಲಿ ನಡೆದ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರಗಳು ಯಾವುದೇ ಇರಲಿ, ಅವುಗಳು ಜಾರಿಗೆ ತರುವ ವಿವಿಧ ಇಲಾಖೆಗಳ ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ನೌಕರರ ಪಾತ್ರ ಪ್ರಮುಖವಾದುದ್ದಾಗಿದೆ ಎಂದ ಅವರು ಇತ್ತೀಚೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿದ್ದ ಭೀಕರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡ ಸಂದರ್ಭದಲ್ಲಿ ಹಗಲಿರುಳೆನ್ನದೆ ಶ್ರಮಿಸಿದ ನೌಕರರ ಸೇವೆ ಅನುಪಮವಾದುದು ಎಂದವರು ಪ್ರಶಂಸಿದರು.
ತಮ್ಮ ಜೀವಿತದ ಅಮೂಲ್ಯ ಸಮಯವನ್ನು ಕಚೇರಿಯಲ್ಲಿ ಕಳೆಯುವ ನೌಕರರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಇದು ಸಾರ್ವಜನಿಕ ಸೇವೆಗಾಗಿ ತಮಗೆ ದೊರೆತ ಸದವಕಾಶವೆಂದು ಭಾವಿಸಿ, ಜನಹಿತವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ನೌಕರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ ಎಂದರು.
ಸರ್ಕಾರಿ ನೌಕರರ ಅನೇಕ ಸಮಸ್ಯೆಗಳ ಬಗ್ಗೆ ಈಗಾಗಲೆ ತಿಳಿಯುವ ಪ್ರಯತ್ನ ಮಾಡಲಾಗಿದೆ. ಅವುಗಳ ಸಮಗ್ರ ಮಾಹಿತಿ ನೀಡುವಂತೆ ಈಗಾಗಲೆ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿ ಅವರು ನೀಡುವ ವರದಿಯನ್ನಾಧರಿಸಿ, ಕಾನೂನಿನ ಪರಿಮಿತಿಯಲ್ಲಿ ಸೂಕ್ತ ಕ್ರಮಕ್ಕೆಗೊಳ್ಳಲಾಗುವುದು ಎಂದವರು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ವಿವಿಧ ಇಲಾಖೆಗಳ ನೌಕರರ ಸಮಸ್ಯೆಗಳನ್ನು ಆಲಿಸಲಾಗಿದೆ. ಅವುಗಳಲ್ಲಿ ಬಹುಸಮಸ್ಯಾತ್ಮಕವಾದುದು ಶಿಕ್ಷಣ ಇಲಾಖೆಯನ್ನು ಒಳಗೊಂಡು ಎಲ್ಲಾ ಇಲಾಖೆಗಳ ನೌಕರರ ಸಮಸ್ಯೆಗಳನ್ನು ಗುರುತಿಸಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದ ಸಮಸ್ಯೆಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ನಿರೀಕ್ಷೆಯಂತೆ ಹಲವು ಪಂಚಾಯತ್‍ರಾಜ್ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಇದೆ ಮಾದರಿಯಲ್ಲಿ ಎಲ್ಲಾ ಇಲಾಖೆಗಳ ಸಚಿವರು ಹಾಗೂ ನೌಕರರ ಸಮಸ್ಯೆಗಳ ಕುರಿತು ಸಮಾಲೋಚನೆ ಸಭೆ ನಡೆಸಿ, ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಲಾಗುವುದು. ಇರುವ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯದೇ ಇತ್ಯರ್ಥಪಡಿಸಲು ಯತ್ನಿಸಲಾಗುವುದು ಎಂದವರು ನುಡಿದರು.
 ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ತಿದ್ದುಪಡಿ, ಎನ್.ಪಿ.ಎಸ್.ನೌಕರರ ಬೇಡಿಕೆಗಳು, ಕೇಂದ್ರಕ್ಕೆ ಸಮಾನವಾದ ವೇತನ ನೀತಿ, ಪದೋನ್ನತಿ ಮುಂತಾದ ಹಲವುಗಳ ಸಮಸ್ಯೆಗಳ ಇತ್ಯರ್ಥಕ್ಕೆ ಈಗಾಗಲೇ ಸರ್ಕಾರದ ಗಮನಸೆಳೆಯಲಾಗಿದೆ ಎಂದ ಅವರು ಮುಂದಿನ ವರ್ಷ ನೌಕರರ ಸಂಘ ಸ್ಥಾಪನೆಗೊಂಡು ಶತಮಾನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸಹಾಯಧನದೊಂದಿಗೆ ಸುವ್ಯವಸ್ಥಿತವಾದ ಶತಮಾನೋತ್ಸವ ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಭವ್ಯ ಸಮಾರಂಭವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.
 ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ, ರಾಜ್ಯ ನೌಕರರ ಸಂಘದ ಗೌರವಾಧ್ಯಕ್ಷ ಶಿವರುದ್ರಯ್ಯ, ಪ್ರಧಾನ ಕಾರ್ಯದರ್ಶಿ ಜಗದೀಶಗೌಡಪ್ಪ ಪಾಟೀಲ, ಶ್ರೀನಿವಾಸ್, ರುದ್ರಪ್ಪ, ವಿಭಾಗೀಯ ಉಪಾಧ್ಯಕ್ಷ ಮೋಹನ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...