ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಜಿಲ್ಲೆಯ ನೌಕರರು

Source: so news | Published on 28th January 2020, 12:06 AM | State News | Don't Miss |


ಶಿವಮೊಗ್ಗ:ಜಿಲ್ಲಾಡಳಿತವು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸುತ್ತಿರುವ ವಿವಿಧ ಶ್ರೇಣಿಯ ನೌಕರರಿಗೆ ಪ್ರತಿ ವರ್ಷ ಸರ್ಕಾರದ ವತಿಯಿಂದ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಹ ನೌಕರರನ್ನು ಆಯ್ಕೆ ಮಾಡಿ, ಇಂದು ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರಶಸ್ತಿ ವಿಜೇತರ ವಿವರ :
ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ|| ಕಿರಣ್‍ಕುಮಾರ್, ಶಿಕಾರಿಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಉಮಾಶಂಕರ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಶಿರಸ್ತೇದಾರ್ ಶ್ರೀಮತಿ ಲಕ್ಷ್ಮೀ ಜಿ.ಎಂ., ಸೊರಬ ತಾಲೂಕು ಉಳವಿ ನಾಡಕಚೇರಿಯ ತಹಶೀಲ್ದಾರ್ ಎ.ಟಿ.ಕುಮಾರ್ ಮತ್ತು ಹೊಸನಗರ ತಾಲೂಕು ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಶ್ರೀಮತಿ ಧನ್ಯ ಹೆಚ್.ಎಂ., ಸಾಗರ ತಾಲೂಕು ಭಾನುಕುಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಮುಕ್ತ ವಿ.ಮೊಗೇರ, ಭದ್ರಾವತಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಆರ್.ಅಶೋಕ್, ಜಡೆ ಪ್ರಾಥಮಿಕ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಕಮಲು ಎಂ., ತೀರ್ಥಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಲಕ್ಷ್ಮೀ ಟಿ.ನಾಯ್ಕ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಹನ ಚಾಲಕ ಟಿ.ತಿಪ್ಪೇಸ್ವಾಮಿ.
ಪ್ರಶಸ್ತಿಗೆ ಭಾಜನರಾದ ಸದರಿ ನೌಕರರಿಗೆ ಹತ್ತು ಸಾವಿರ ರೂ.ಗಳ ನಗದು, ಪ್ರಮಾಣ ಪತ್ರ ಮತ್ತು ಸ್ಮರಣಿಕೆ ನೀಡಿ, ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾಡಳಿತದ ಪರವಾಗಿ ಅಭಿನಂದಿಸಿದರು. ಪ್ರಶಸ್ತಿ ಪಡೆದ ಎಲ್ಲಾ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

Read These Next

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಅರ್ಜಿ ಆಹ್ವಾನ                                                         

ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ...