ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದ: ಶ್ವೇತಾ ದೇವರಾಜ್

Source: so news | By MV Bhatkal | Published on 15th June 2019, 10:01 PM | State News | Don't Miss |

ಹಾಸನ: ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಅನಿಷ್ಠ ಪದ್ದತಿಗಳನ್ನು ದೂರ ಮಾಡಬಹುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಹಯೋಗದೊಂದಿಗೆ ವಿಶ್ವ ಬಾಲ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಶಿಕ್ಷಣ ಎಲ್ಲರಿಗೂ ತಲುಪುವ ನಿಟ್ಟಿನಲ್ಲಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಬಾಲ ಕಾರ್ಮಿಕ ಪದ್ದತಿಯನನ್ನು ಹೊಗಲಾಡಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳ ಗಣತಿಯ ಸಂದರ್ಭ ಬಾಲ ಕಾರ್ಮಿಕರನ್ನು ಗುರುತಿಸಿ ಅವರಿಗೆ ಅರಿವು ಮೂಡಿಸಬೇಕು, ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರು ಹಾಗೂ ಪ್ರಜ್ಞಾವಂತ ಜನರು ಇದರ ಬಗ್ಗೆ ಗಮನಹರಿಸಿ ಬಾಲ ಕಾರ್ಮಿಕ ಪದ್ದತಿ ನಿಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ|| ಕೆ. ಎನ್ ವಿಜಯ ಪ್ರಕಾಶ್ ರವರು ಮಾತನಾಡಿ ಶಿಕ್ಷಣ ಇದ್ದಲ್ಲಿ ಶಿಸ್ತು ಅನಿವಾರ್ಯ, ಸಮಾಜಿಕ ನ್ಯಾಯ ಮತ್ತು ಭದ್ರತೆ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಅಪಾಯಕಾರಿ ಉದ್ಯಮಗಳಲ್ಲಿ ತೊಡಗಿಕೊಂಡಿರುವ ಮಕ್ಕಳನ್ನು ರಕ್ಷಿಸುವುದು ಎಲ್ಲರ ಹೊಣೆಯಾಗಿದೆ ಎಂದರು.
ಬಾಲ ಕಾರ್ಮಿಕರು ತಂದೆ-ತಾಯಿಗಳ ಪ್ರೀತಿ ವಂಚಿತರಾಗಿರುತ್ತಾರೆ ಅಲ್ಲದೆ ಅನೇಕ ಮಕ್ಕಳು ದೌರ್ಜನ್ಯಕ್ಕೆ ಒಳಗಾಗಿದ್ದು ಇಂತಹ ಪ್ರಕರಣಗಳನ್ನು ತಡೆಯಬೇಕು ಕೇವಲ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಂಡ ಮಾಲಿಕರಲ್ಲದೆ, ಪೋಷಕರೂ ಕೂಡ 6 ತಿಂಗಳಿಂದ 2 ವರ್ಷಗಳವರೆಗೆ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಡಾ|| ಕೆ.ಎನ್.ವಿಜಯ ಪ್ರಕಾಶ್ ಎಚ್ಚರಿಸಿದರು.
ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಬಾಲ ಕಾರ್ಮಿಕರ ಪ್ರಕರಣಗಳಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಈ ವರ್ಷದ ಸರ್ಕಾದ ದ್ಯೇಯವಾದ ಪೀಳಿಗೆಯ ರಕ್ಷಣೆ ಮತ್ತು ಆರೋಗ್ಯ ಘೋಷಣೆ ಗುರಿಯು ನಮ್ಮೆಲ್ಲರ ಮನೆ ಮಾತಾಗುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ವಿರೋದಿಸುವಲ್ಲಿ ಇಲಾಖೆ ಹಾಗೂ ಇಲಾಖೇತರ ಸಂಘಟನೆಗಳು ಶ್ರಮಿಸಬೇಕು ಎಂದು ತಿಳಿಸಿದರು.
ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ್ ಸಿಂದಿಹಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಟಿ.ವಿ ಅರುಣ್ ಕುಮಾರ್, ಕ್ಷೇತ್ರ ಶೀಕ್ಷಣಾಧಿಕಾರಿ ಮಂಜುನಾಥ್, ಹಾಸನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ, ಮತ್ತಿತರರು ಭಾಗವಹಿಸಿದ್ದರು.
ಜಾಥಾ ಉದ್ಘಾಟನೆ: ಬಾಲ ಕಾರ್ಮಿಕ ವಿರೋದಿ ದಿನಾಚರಣೆಯ ಅಂಗವಾಗಿ ಜಿಲ್ಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾಲ್ನಡಿಗೆ ಜಾಥಾ ಹಾಗೂ ಬೈಕ್ ರ್ಯಾಲಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಕೆ ಬಸವರಾಜು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಎಂ.ಎಲ್ ವೈಶಾಲಿ ಅವರು ಚಾಲನೆ ನೀಡಿದರು.
ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ್ ಸಿಂದಿಹಟ್ಟಿ, ಸ್ವತಂತ್ರ ಹೋರಾಟಗಾರರಾದ ಹೆಚ್.ಎಂ.ಶಿವಣ್ಣ, ಜಿಲ್ಲಾ ವಾರ್ತಾಧಿಕಾರಿ ವಿನೋದ ಚಂದ್ರ, ಕಾರ್ಮಿಕ ಅಧಿಕಾರಿ ರಮೇಶ್, ಸಮಾಜ ಸೇವಕರಾದ ಕೆ.ಟಿ.ಜಯಶ್ರಿ ಪೌಲಸ್ ಮತ್ತಿತರರು ಹಾಜರಿದ್ದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...