ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ “ಇಂಜಿನೀಯರ್ಸ್ ದಿನಾಚರಣೆ”

Source: sonews | By Staff Correspondent | Published on 16th September 2019, 10:44 PM | State News | Don't Miss |

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, “ಜ್ಞಾನ ಸಂಗಮ”, ಬೆಳಗಾವಿಯಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್ ದಿನಾಚರಣೆ”ಯನ್ನು ಆಚರಿಸಲಾಯಿತು.

ವಿಶ್ವವಿದ್ಯಾಲಯದ ಕುಲಪತಿ ಡಾ. ಕರಿಸಿದ್ದಪ್ಪ ಅವರು ವಿಶ್ವೇಶ್ವರಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಸರ್ ಎ0. ವಿಶ್ವೇಶ್ವರಯ್ಯನವರು ತಮ್ಮ ಸರಳ ಜೀವನ ಶೈಲಿ, ಅಪಾರ ಬುದ್ದಿವ0ತಿಕೆ ಹಾಗೂ ವೃತ್ತಿಶೀಲತೆ ಮು0ತಾದ ಗುಣಗಳಿ0ದ ನಮ್ಮ ದೇಶದ ಇತಿಹಾಸದಲ್ಲಿ ದ0ತಕಥೆಯಾಗಿದ್ದಾರೆ” ಎ0ದು ಹೇಳಿದರು. ನಮ್ಮ ನಾಡಿನ ಬ್ಯಾ0ಕಿ0ಗ್, ನೀರಾವರಿ, ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸರ್ ಎ0.ವಿಯವರ ಕೊಡುಗೆಗಳು ಅಪಾರ, ಅದಕ್ಕಾಗಿ ನಾವೆಲ್ಲರೂ ಸರ್ ಎ0.ವಿ. ಅವರಿಗೆ ನಿಜವಾಗಿ ಗೌರವ ಸಲ್ಲಿಸಬೇಕೆ0ದು ಕರೆ ನೀಡಿದರು.

ಕುಲಸಚಿವರಾದ ಡಾ. ಎ. ಎಸ್. ದೇಶಪಾಂಡೆ, ಹಣಕಾಸು ಅಧಿಕಾರಿಗಳಾದ ಶ್ರೀಮತಿ ಎಂ. ಎ. ಸಪ್ನಾ, ಸ್ಥಾನಿಕ ಅಭಿಯಂತರರಾದ ಹೇಮಂತಕುಮರ, ವಿಶ್ವವಿದ್ಯಾಲಯದ ಭೋದಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...