5 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಮಂಜೂರು:ಶಾಸಕ ಸುನೀಲ್ ನಾಯ್ಕ

Source: so news | By MV Bhatkal | Published on 22nd May 2019, 1:09 PM | Coastal News | Don't Miss |

ಭಟ್ಕಳ: ಪಾಲಕರು ಇಂಗ್ಲಿಷ್ ಮಾಧ್ಯಮ ಶಾಲೆಗಳ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವೇ ಆಸಕ್ತಿ ವಹಿಸಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವ ಯೋಜನೆ ಕಾರ್ಯಗತಗೊಳಿಸಿದ್ದು, ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ 5 ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ವಿಭಾಗವನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ತಿಳಿಸಿದರು.
ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಶಾಸಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊರಟೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೆರ್ನಮಕ್ಕಿ ಹಾಗೂ ಹೊನ್ನಾವರ ತಾಲ್ಲೂಕಿನ ಚಿತ್ತಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಈ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಎಂದರು.
ಅಲ್ಲದೇ ಮಗುವಿಗೆ ಒಂದೇ ಸೂರಿನಡಿ ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಯೋಜನೆಯಡಿ ಆಯ್ಕೆಯಾದ ಒಟ್ಟೂ ನೂರು ಶಾಲೆಗಳಲ್ಲಿ ಭಟ್ಕಳ ತಾಲ್ಲೂಕು ಬೈಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜೆಎಚ್ ಪಿಎಸ್ ಮತ್ತು ಜೆಎಚ್ಎಸ್ ಬೈಲೂರು ಶಾಲೆಯನ್ನು ಆಯ್ಕೆ ಮಾಡಲಾಗಿದೆ. ಪಾಲಕರು ಈ ಶಾಲೆಗಳ ಪ್ರಯೋಜನ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ಕೊಳ್ಳುವಂತಾಗಬೇಕು ಎಂದು ಶಾಸಕರು ಹೇಳಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...