ಧಾರವಾಡ: ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Source: S O News | By Laxmi Tanaya | Published on 27th February 2024, 6:50 PM | State News | Don't Miss |

ಧಾರವಾಡ: ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ  ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕಲಾ ವಿಭಾಗ, ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಸೇರಿದಂತೆ ಒಟ್ಟು 26,411 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಧಾರವಾಡ. ಹುಬ್ಬಳ್ಳಿ. ಕಲಘಟಗಿ. ಕುಂದಗೋಳ. ನವಲಗುಂದ ಸೇರಿದಂತೆ 12,704 ಗಂಡು ಮಕ್ಕಳು, 12,707 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಕೇಂದ್ರಗಳಲ್ಲಿ ಯಾವುದೆ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ, ಅವರು ಮಾತನಾಡಿ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು  ಹೊರೆತುಪಡಿಸಿ ಬೇರೆಯವರು ಮೊಬೈಲ್ ಬಳಕೆ ಮಾಡಲು ನಿಷೇದಿಸಲಾಗಿದೆ, ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲು ಅನುಮಾನಸ್ಪದ ಜನರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರತಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಬಂದ ಮಾಡಲು ಕ್ರಮ ಜರುಗಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ  ಪ್ರಶ್ನೆ ಪತ್ರಿಕೆಗಳನ್ನು ವಿತರಣೆ ಮಾಡಲು ವಿವಿಧ ತಾಲ್ಲೂಕಿನಲ್ಲಿ 16 ಮಾರ್ಗಗಳನ್ನು ಗುರುತಿಸಲಾಗಿದೆ. ಒಂದು ತಂಡಕ್ಕೆ 03 ಜನ ಸದಸ್ಯರನ್ನು ನೇಮಿಸಲಾಗಿದೆ. ಮಾರ್ಗಾಧಿಕಾರಿಗಳ ತಂಡದ 1ನೇ ಅಧಿಕಾರಿ ಅವರ ಸರಕಾರಿ ವಾಹನಕ್ಕೆ ಉಪನಿರ್ದೇಶಕರು ಇರುವರು. ಪದವಿ ಪೂರ್ವ ಶಿಕ್ಷಣ ಇಲಾಖೆ ಧಾರವಾಡ ಇವರ ಕಛೇರಿ ವತಿಯಿಂದ  ಪರೀಕ್ಷೆ ಪ್ರಾರಂಭವಾಗುವ 3 ದಿನ ಮುಂಚಿತವಾಗಿ ಜಿಪಿಎಸ್‍ನ್ನು ಅಳವಡಿಸಲಾಗುವುದು. ಜಿಲ್ಲಾ ತ್ರಿಸದಸ್ಯ ಸಮಿತಿ ವತಿಯಿಂದ ಮಾರ್ಗಾಧಿಕಾರಿಗಳು ಧಾರವಾಡ ಶಹರದ ಹಾಗೂ ಗ್ರಾಮೀಣ ಪ್ರದೇಶದ ಪರೀಕ್ಷಾ ಕೇಂದ್ರಗಳನ್ನು ಹೊರತುಪಡಿಸಿ, ತಾಲ್ಲುಕಿನ ಮಾರ್ಗಾಧಿಕಾರಿಗಳು 2:30 ಗಂಟೆಗೆ ಪರೀಕ್ಷೆ ಪ್ರಾರಂಭದ ಮುಂಚಿತವಾಗಿ ಹಾಜರಿರಬೇಕು, ಉಳಿದ ಮಾರ್ಗಾಧಿಕಾರಿಗಳು 2 ಗಂಟೆ ಮುಂಚಿತವಾಗಿ ಜಿಲ್ಲಾ ಖಜಾನೆಗೆ ಹಾಜರಿದ್ದು, ಪರೀಕ್ಷಾ ಸಾಮಗ್ರಿಗಳನ್ನು ಸ್ವೀಕರಿಸಿ ಸೂಕ್ತ ಪೆÇಲೀಸ್ ಸಿಬ್ಬಂದಿ ತಂಡದ ಸದಸ್ಯರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಕ್ಷಕರು ಮತ್ತು ಪ್ರಶ್ನೆ ಪತ್ರಿಕೆ ಪಾಲಕರಿಗೆ ನೀಡಿ ಸ್ವೀಕೃತಿ ಪಡೆಯಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಅವರು ಹೇಳಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸರಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರನ್ನು ಪ್ರಶ್ನೆ ಪತ್ರಿಕೆ ಪಾಲಕರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲೆಯ ಡಿಡಿಪಿಯು ಸುರೇಶ ಕೆ. ಅವರು ಸಭೆಯನ್ನು ನಿರೂಪಿಸಿ, ಮಾತನಾಡಿದರು.

ಸಭೆಯಲ್ಲಿ ಧಾರವಾಡ ಜಿಲ್ಲೆಯ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಜಿಲ್ಲಾ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...