ಕಾರವಾರ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ; ಭಾಷಣ, ಪ್ರಬಂಧ ಸ್ಪರ್ಧೆ ಆಯೋಜನೆ

Source: S O News Service | By Office Staff | Published on 24th February 2020, 11:07 PM | Coastal News | Don't Miss |

ಕಾರವಾರ: ಕರ್ನಾಟಕರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಪ್ರಯುಕ್ತ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪ-ಪ್ರಾದೇಶಿಕ ವಿಜ್ಞಾನಕೇಂದ್ರದಲ್ಲಿ ಇತ್ತೀಚಿಗೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಾಯಕ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರಕಾಶ ಅಣ್ವೇಕರ್ ಹಾಗೂ ಸೇಂಟ್ ಜೊಸೆಫ್ ಪದವಿಪೂರ್ವ ಕಾಲೇಜಿನ ಸಹಾಯಕ ಭೌತಶಾಸ್ತ್ರ ಪ್ರಾಧ್ಯಾಪಕ ಸಂಜಯ ಸೂರ್ಯ ಭಟ್ ಅವರು ಆಗಮಿಸಿ, ಭಾಷಣ ಮಾಡುವ ಕಲೆ ಹಾಗೂ ಕಾರ್ಯಕ್ರಮವನ್ನು ಉದ್ದೇಶಿಸಿ ವಿದ್ಯಾರ್ಥಿಗಳಿಗೆ ಕೆಲವು ಹಿತನುಡಿಗಳನ್ನು ಹೇಳಿದರು. 
ಅತಿಥಿಗಳಾಗಿ ಬಾಡ ಶಿವಾಜಿ ಪ್ರೌಢಶಾಲೆಯ ನಿವೃತ್ತ ವಿಜ್ಞಾನ ಶಿಕ್ಷಕ ದೇವಿದಾಸ ಸಾವಂತ ಆಗಮಿಸಿದ್ದರು. ವಿಜೇತರಾದ ವಿದ್ಯಾರ್ಥಿಗಳಿಗೆ ಫೆ.28ರಂದು ನಡೆಯುವ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಈ ಸ್ಪರ್ಧೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಒಟ್ಟು ಸೇರಿ 45 ಜನರು ಹಾಜರಿದ್ದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...