ಮಕ್ಕಳನ್ನು ಅಕ್ಕರೆ ಹಾಗೂ ಸಹಿಷ್ಣುತೆಯಿಂದ ನೋಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನಿಗೂ ಇರಬೇಕು

Source: so news | Published on 1st December 2019, 12:08 AM | State News | Don't Miss |

 

ಮಂಡ್ಯ:- ಪ್ರತಿಯೊಬ್ಬ ವ್ಯಕ್ತಿಯು ಕೂಡ ಎಲ್ಲಾ ಸಂದರ್ಭ ಮತ್ತು ಸಮಯದಲ್ಲೂ ಮಕ್ಕಳನ್ನು ಇಷ್ಟಪಡುತ್ತಾರೆ. ಆದರೆ ಆ ಇಷ್ಟ ಎನ್ನುವುದು ಕೇವಲ ಅನುಕಂಪವಾಗಬಾರದು, ಮಕ್ಕಳನ್ನು ಅಕ್ಕರೆ ಹಾಗೂ ಸಹಿಷ್ಣುತೆಯಿಂದ ನೋಡಿಕೊಳ್ಳುವಂತಹ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನಿಗೂ ಇರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ನಗರದ ಪ್ರೇರಣ ಸಂಸ್ಥೆ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರ ಹಾಗೂ ಪ್ರೇರಣ ವಿಶೇಷ ಚೇತನರ ಟ್ರಸ್ಟ್ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಕೇಂದ್ರಿಕೃತವಾಗಿ ನವೆಂಬರ್ ತಿಂಗಳಿನಲ್ಲಿ ಒಂದಲ್ಲ ಒಂದು ದಿನವನ್ನು ಮಕ್ಕಳ ಹಬ್ಬ, ಮಕ್ಕಳ ದಿನಾಚರಣೆ ಮತ್ತು ಮಕ್ಕಳ ವಾರವಾಗಿ ವಿವಿಧ ದಿಕ್ಕುಗಳಲ್ಲಿ ಆಚರಣೆ ಮಾಡುತ್ತಿದ್ದೇವೆ. ಮಕ್ಕಳೆಂದರೆ ಶ್ರೇಷ್ಠರು, ಮಕ್ಕಳಿಗೂ ಕೂಡ ಅವರದೇ ಆದಂತಹ ಹಕ್ಕು, ಆಶೋತ್ತರ ಹಾಗೂ ಆಸೆಗಳು ಇರುತ್ತವೆ ಎಂಬುದು ಸಮಾಜಕ್ಕೆ ಹಾಗೂ ಪ್ರತಿಯೊಬ್ಬ ನಾಗರೀಕನಿಗೂ ಅರ್ಥವಾಗಬೇಕು. ವಿಕಲಚೇತನ ಮಕ್ಕಳಿಗೂ ಕೂಡ ಅವಶ್ಯಕತೆಗಳು ಇರುತ್ತವೆ. ಹೀಗಾಗಿ ಅಂತಹ ಮಕ್ಕಳಿಗೆ ಬರಿ ಅನುಕಂಪವಲ್ಲದೇ ಅವರನ್ನು ಪ್ರೀತಿಯಿಂದ ನೋಡಿ ಮುಖ್ಯವಾಹಿನಿಗೆ ತರುವಂತಹ ವಾತಾವರಣವನ್ನು ನಿರ್ಮಿಸಬೇಕು ಎಂದರು.
ಪ್ರತಿಯೊಂದು ಮಗುವಿನ ಮನಸ್ಸಿನಲ್ಲಿ ಉಲ್ಲಾಸ, ಲವಲವಿಕೆ ಹಾಗೂ ಸಂತೋಷವನ್ನು ಮೂಡಿಸುವಂತಹ ಜವಾಬ್ದಾರಿ ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರೀಕ ಮತ್ತು ವ್ಯವಸ್ಥೆಯ ಗುರುತರ ಜವಾಬ್ದಾರಿಯಾಗಿರುತ್ತದೆ. ಪ್ರಕೃತಿಯ ಅಥವಾ ವಂಶವಾಹಿನಿಯ ಸಮಸ್ಯೆಯಿಂದ, ವಿಕಲಚೇತನ ಎಂಬುದು ಹುಟ್ಟಿನಿಂದ, ಇನ್ನೂ ಕೆಲವರಿಗೆ ಮಕ್ಕಳ ವ್ಯವಸ್ಥೆಯಲ್ಲಿ ಹಾಗೂ ಪ್ರೌಢವ್ಯವಸ್ಥೆಯಲ್ಲಿ ಕಂಡುಬರುತ್ತದೆ. ಆದ್ದರಿಂದ ಮಕ್ಕಳು ಕಿನ್ನತೆಗೆ ಒಳಗಾಗದೆ ಮುಂದಿನ ಜೀವನವನ್ನು ಅತ್ಯಂತ ಬಲಿಷ್ಟವಾಗಿ ನಿರ್ಮಿಸಿಕೊಳ್ಳಬೇಕು. ವಿಕಲಚೇತನ ಮಕ್ಕಳು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದಾರೆ. ಹಾಗೆಯೇ ನಿವೇಲ್ಲರೂ ಕೂಡ ಹೆಚ್ಚಿನ ಸಾಧನೆಯನ್ನು ಮಾಡಬೇಕು ಎಂದು ಹೇಳಿದರು.
ಮಕ್ಕಳು ಒಂದೇ ಸೂರಿನೆಡೆ ಸೇರಿ ಸಂಭ್ರಮವನ್ನು ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ಇಂತಹ ಕಾರ್ಯಕ್ರಮಗಳನ್ನು ಕಾಲಾನು ಕಾಲಕ್ಕೆ ನಡೆಸುವುದರ ಮೂಲಕ, ವಿಕಲಚೇತನ, ಬುದ್ಧಿಮಾಂಧ್ಯ ಹಾಗೂ ಎಚ್.ಐ.ವಿ ಪೀಡಿತ ಮಕ್ಕಳನ್ನು ಹುರಿದುಂಬಿಸಿ ಅವರ ಕಣ್ಣಲ್ಲಿ ಬೆಳಕನ್ನು ಮೂಡಿಸೋಣ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್.ರಾಜಮೂರ್ತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕೆ.ಎಸ್.ವಿಜಯ ಪ್ರಸಾದ್, ಬಾಲಕರ ಬಾಲಮಂದಿರದ ಅಧೀಕ್ಷಕರಾದ ಸಿ.ಅನ್ನದಾನಿ, ಬಾಲಕಿಯರ ಬಾಲಮಂದಿರದ ಅಧೀಕ್ಷರಾದ ಎಂ.ಪ್ರತಿಮಾ, ಪ್ರೇರಣ ವಿಶೇಷ ಚೇತನ ಟ್ರಸ್ಟ್‍ನ ಅಧ್ಯಕ್ಷರಾದ ರವಿಕುಮಾರ್ ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...