ಸ್ವಾಭೀಮಾನದ ಪ್ರತೀಕ ಗಣರಾಜ್ಯ ದಿನ: ಮಾಧುಸ್ವಾಮಿ

Source: S.O. News Service | By MV Bhatkal | Published on 26th January 2020, 8:16 PM | Coastal News | Don't Miss |

ಹಾಸನ:ಇಡೀ ರಾಷ್ಟ್ರದ ಜನತೆಯ ಸ್ವಾಭಿಮಾನದ ಪ್ರತೀಕವಾದ ಸುದಿನವೇ ಈ ಗಣರಾಜ್ಯೋತ್ಸವವಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಹೇಳಿದರು.
ನಗರದ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಫಲಪುಷ್ಪ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತ 1947 ರಲ್ಲೇ ಸ್ವಾತಂತ್ರ್ಯವಾದರೂ ಶಾಸನಬದ್ದ ಸಂವಿಧಾನಯುತವಾದ ಆಡಳಿತಕ್ಕೆ ಆವಕಾಶವಾದದ್ದು 70 ವರ್ಷಗಳ ಹಿಂದಿನ ಈ ದಿನವೇ ಆಗಿದೆ ಎಂದು ಹೇಳಿದರು.
ಫಲಪುಷ್ಪ ಪ್ರದರ್ಶನದಲ್ಲಿರುವ ಹೂವುಗಳು ನೋಡುಗರನ್ನ ಆಕರ್ಷಿಸುವುದು ಮಾತ್ರವಲ್ಲ, ಮನಸ್ಸಿಗೆ ಉಲ್ಲಾಸ ನೀಡಿ ತಂಪನೆರೆದ ಅನುಭವ ನೀಡುತ್ತವೆ. ಬ್ರಿಟಿಷರ ಆಳ್ವಿಕೆಯಿಂದ ದೇಶದಲ್ಲಿ ಆರಂಭವಾದ ಅನುಕರಣೀಯ ಬದುಕಿಗೆ ಆಂಟಿಕೊಂಡಿರುವ ನಾವು ನಮ್ಮತನವನ್ನು ಮರೆತಂತೆ ದೇಶಿಯ ಆಹಾರ ಪದ್ದತಿಯಿಂದಲ್ಲೂ ಬಹುದೂರ ಉಳಿದಿದ್ದೇವೆ ಎಂದು ಜೆ.ಸಿ. ಮಾಧುಸ್ವಾಮಿ ಅವರು ಅಭಿಪ್ರಾಯಪಟ್ಟರು.
ಈ ಪ್ರದರ್ಶನದಲ್ಲಿರುವ ಸ್ವದೇಶಿ ಹಣ್ಣು ತರಕಾರಿಗಳು ಸಾವಯವ ಕೃಷಿ ಪದ್ದತಿಯಿಂದ ಬೆಳೆದವುಗಳಾಗಿದ್ದು, ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಅವುಗಳನ್ನು ಹೆಚ್ಚಾಗಿ ಬಳಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವಾರಾಜ್ ಅವರು ಮಾತನಾಡಿ ಫಲಪುಷ್ಪ ಪ್ರದರ್ಶನದ ಸಲುವಾಗಿ ಹೂವುಗಳಿಂದ ನಿರ್ಮಿತವಾಗಿರುವ ಸ್ವಾತಂತ್ರ್ಯ ಭಾರತದ ಪ್ರತೀಕವಾಗಿ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಆಶೋಕ ಸ್ತಂಭಗಳು ಅದ್ಬುತವಾಗಿದೆ ಎಂದರು.
ಕಾಲಕಾಲಕ್ಕೆ ಸಿಗುವ ವಿವಿಧ ಬಗೆಯ ಹಣ್ಣು ತರಕಾರಿಗಳನ್ನು ಹೆಚ್ಚಾಗಿ ಬಳಸಬೇಕು ಇಲ್ಲವಾದಲ್ಲಿ ದೇಶಿಯ ಆಹಾರ ಪದಾರ್ಥಗಳನ್ನ ಪುಸ್ತಕಗಳಲ್ಲಷ್ಟೇ ತೋರಿಸುವ ಪರಿಸ್ಥಿತಿಗೆ ಅವಕಾಶ ನೀಡಬಾರದು. ಉತ್ತಮ ವಿಧಾನದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಯುವ ಮೂಲಕ ನಮ್ಮ ಮುಂದಿನ ಪೀಳಿಗೆಗೂ ಅವುಗಳನ್ನ ಪರಿಚಯಿಸೋಣ ಎಂದು ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಜಿ.ಪಂ. ಕೃಷಿ ಮತ್ತು ತೋಟಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಮತ ರಮೇಶ್, ತಹಶೀಲ್ದಾರ್ ಶಿವಶಂಕರಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಮಧುಸೂದನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಜಿ.ಪಂ. ಯೋಜನಾಧಿಕಾರಿ ನಾಗರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಲಿಂಗಪ್ಪ ಎಸ್ ಕುಂಬಾರ್, ಹೇಮಾವತಿ ತೋಟಗಾರಿಕಾ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಹಾಜರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...