ಆರ್ಥಿಕ ಗಣತಿಗೆ ಎಲ್ಲರ ಸಹಕಾರ ಅಗತ್ಯ: ಜಯಶ್ರೀ ಮೊಗೇರ

Source: so news | By MV Bhatkal | Published on 19th June 2019, 7:35 PM | Coastal News | Don't Miss |

ಕಾರವಾರ: ಏಳನೆ ಆರ್ಥಿಕ ಗಣತಿಯ ಲಾಭಾಂಶ ಸಾರ್ವಜನಿಕರಿಗೇ ಆಗಲಿದ್ದು ಗಣತಿ ಸಂದರ್ಭದಲ್ಲಿ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಏಳನೇ ಆರ್ಥಿಕ ಗಣತಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.
ಗಣತಿ ಆಧಾರದ ಮೇಲೆಯೇ ಸರ್ಕಾರದ ಯೋಜನೆಗಳನ್ನು ರೂಪಿಸಲು ಸಾಧ್ಯವಿದ್ದು ಅದರ ಪ್ರಯೋಜನ ಅಂತಿಮವಾಗಿ ಸಾರ್ವಜನಿಕರಿಗೇ ಆಗಿದೆ. ಆದ್ದರಿಂದ ಗಣತಿ ಸಂದರ್ಭದಲ್ಲಿ ಸಂಬಂಧಿಸಿದರು ಗಣತಿದಾರರಿಗೆ ಪೂರಕವಾಗಿ ಸ್ಪಂದಿಸಬೇಕು ಎಂದು ಅವರು ತಿಳಿಸಿದರು.
ಗಣತಿದಾರರು ಮಾಹಿತಿ ಸಂಗ್ರಹಿಸುವ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ವಿಶ್ವಾಸಾರ್ಹತೆಯನ್ನು ಸಾಧಿಸಬೇಕು ಹಾಗೂ ವಾಸ್ತವ ಮಾಹಿತಿಯನ್ನು ನಮೂದಿಸಿಕೊಳ್ಳಬೇಕು. ಜಿಲ್ಲಾ ಸಾಂಖ್ಯಿಕ ಇಲಾಖೆ ಈ ಇದರ ಮೇಲ್ವಿಚಾರಣೆಯನ್ನು ಉತ್ತಮವಾಗಿಯೇ ವಹಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳು ವಿ. ಎಂ ಹೆಗಡೆ ರವರು, 6ನೇ ಆರ್ಥಿಕ ಗಣತಿಯನ್ನಾ 2012-13 ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಶಿಕ್ಷಕರ ಸಹಾಯದಿಂದ ಕೈಗೊಂಡಿದ್ದು ಅದಕ್ಕೂ ಹಿಂದಿನ 5 ಗಣತಿಗಳನ್ನು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಪ್ರಾಥಮಿಕ/ಪ್ರೌಡ ಶಾಲಾ ಶಿಕ್ಷಕರಿಂದ ಗಣತಿಯನ್ನು ಕೈಗೊಳ್ಳಲಾಗಿತ್ತು. ಈ 7 ನೇ ಆರ್ಥಿಕ ಗಣತಿಯನ್ನು
CSC (Common Service Centre) e-govenance Service India Limited ªÀÄvÀÄÛ National Sample Survey Organization (NSSO) ಸಂಸ್ಥೆಯ ಪಾಲುಗಾರಿಕೆಯೊಂದಿಗೆ ಕೈಗೊಳ್ಳಲಾಗುವುದೆಂದು ಹಾಗೂ ವಿಶೇóಷವಾಗಿ ಈ ಗಣತಿ ಕಾರ್ಯವನ್ನು ಜಿ.ಪಿ.ಎಸ್ ಆಧಾರಿತ ಮೋಬೈಲ್ ಆಪ್ ಮೂಲಕ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ವಿನೋದ ವಾಮನ್ ಅಣ್ವೇಕರ ಇವರು, ಆರ್ಥಿಕ ಗಣತಿಯ ಹಿನ್ನೆಲೆ ಹಾಗೂ ಉದ್ದೇಶವನ್ನು ವಿವರಿಸುತ್ತಾ ಆರ್ಥಿಕ ಗಣತಿಯು ದೇಶದ ಭೌಗೋಳಿಕ ಗಡಿಯೊಳಗೆ ನೆಲಗೊಂಡು ಸ್ವಂತ ಉಪಯೋಗಕ್ಕಲ್ಲದ ಸರಕುಗಳ ಉತ್ಪಾದನೆ ಅಥವಾ ಅವುಗಳ ವಿತರಣೆ/ಮಾರಾಟ ಅಥವಾ ಸೇವೆ ಇತ್ಯಾದಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳ/ ಘಟಕಗಳ ಪೂರ್ಣ ಎಣಿಕೆಯಾಗಿರುತ್ತದೆ. ಈ ಗಣತಿಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯಗಳ ಎಲ್ಲಾ ಉದ್ಯಮಗಳ ಗಣತಿಯನ್ನು ಮಾಡಲಾಗುತ್ತದೆ ಎಂದರು.
ಸರಕುಗಳ ಉತ್ಪಾದನೆ, ಅವುಗಳ ವಿತರಣೆ/ಮಾರಾಟ ಅಥವಾ ಸೇವಾ ಚಟುವಟಿಕೆಯಿಂದ ರಾಷ್ಟ್ರೀಯ ಉತ್ಪನ್ನಕ್ಕೆ ಮೌಲ್ಯವನ್ನು ತಂದು ಕೊಡುತ್ತಿದೆಯೋ ಅಂತಹವುಗಳನ್ನು ಆರ್ಥಿಕ ಚಟುವಟಿಕೆ ಎಂದು ಪರಿಗಣಿಸಲಾಗುವುದು. ಆರ್ಥಿಕ ಗಣತಿಯು ದೇಶದ ಪ್ರಗತಿಯಲ್ಲಿ, ರಾಷ್ಟ್ರೀಯ ತಲಾದಾಯ ಮತ್ತು ಜಿಡಿಪಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...